ಸುಳ್ಯ:ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 74ನೇ ಜನ್ಮ ದಿನಾಚರಣೆಯನ್ನು ಅಡ್ಕಾರ್ನ ವನವಾಸಿ ಕಲ್ಯಾಣ ವಿದ್ಯಾರ್ಥಿ ನಿಲಯದ ಮಕ್ಕಳ ಜೊತೆ ಆಚರಿಸಲಾಯಿತು..ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ ನೀಡಿದರು. ದೇಶವನ್ನು ಮುನ್ನಡೆಸುತ್ತಿರುವ ಅತ್ಯಂತ ಪ್ರಭಾವಶಾಲಿ
ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯನ್ನು ವನವಾಸಿ ಕಲ್ಯಾಣ ಆಶ್ರಮದ ಮಕ್ಕಳ ಜತೆ ನಡೆಸುತ್ತಿರುವ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯ ಶ್ಲಾಘನಿಯ. ಇವರ ಕಾರ್ಯ ಮಾದರಿ ಎಂದು ಅವರು ಹೇಳಿದರು.
ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ ಪ್ರಧಾನಿಯವರ ಕಾರ್ಯವೈಖರಿ ಹಾಗೂ ಆಚರಣೆಯ ಹಿನ್ನಲೆಯನ್ನು ತಿಳಿಸಿದರು. ಬಿಜೆಪಿ ಮಂಡಲ ಕೋಶಾಧಿಕಾರಿ ಶುಬೋದ್ ಶೆಟ್ಟಿ ಮೇನಾಲ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಗುಣವತಿ ಕೊಲ್ಲಂತಡ್ಕ,ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ.ನೀರಬಿದಿರೆ, ಜಾಲ್ಸೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹೇಮಂತ್ ಮಠ ,ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ. ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪುಷ್ಪ ಮೇದಪ್ಪ, ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಪಾತಿಕಲ್ಲು, ಸುಳ್ಯ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ,ಸುಳ್ಯ ನಗರ ಪಂಚಯತದ ಸದಸ್ಯರುಗಳು,ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರುಗಳು, ನಿರ್ದೇಶಕಿ ಶ್ರೀದೇವಿ ನಾಗರಾಜ್ ಭಟ್, ಮತ್ತು ಪಕ್ಷದ ಜವಾಬ್ದಾರಿಯ ಪ್ರಮುಖರು ಉಪಸ್ಥಿತರಿದ್ದರು.
ದೀಪ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ, ನರೇಂದ್ರ ಮೋದಿಯವರ ಭಾವಚಿತ್ರಕ್ಕೆ ಆಶ್ರಮದ ವಿದ್ಯಾರ್ಥಿಗಳು ಆರತಿ ಬೆಳಗಿ ಹುಟ್ಟುಹಬ್ಬ ಆಚರಿಸಿದರು
ಅಖಿಲಾ ನೆಕ್ರಾಜೆ ಪ್ರಾರ್ಥನೆ ಹಾಡಿ,ಮಹಿಳಾ ಮೋರ್ಚಾ ಅಧ್ಯಕಷೆ ಇಂದಿರಾ ಸ್ವಾಗತಿಸಿ, ಶ್ರೀದೇವಿ ನಾಗರಾಜ್ ಭಟ್ ವಂದಿಸಿದರು.