ಮಂಗಳೂರು:ಮಂಗಳೂರು-ಗೋವಾ ಮಧ್ಯೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿ.30ರಿಂದ ಆರಂಭಗಲಿದೆ. ಮಂಗಳೂರು ಸೆಂಟ್ರಲ್ – ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ಡಿಸೆಂಬರ್ 30ರಂದು
ಆರಂಭಿಸಲು ದಕ್ಷಿಣ ರೈಲ್ವೆ ಸಿದ್ಧತೆ ನಡೆಸಿದೆ. ಮಂಗಳೂರು – ಮಡಗಾಂವ್ ಸಹಿತ 6 ವಂದೇಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ತಲುಪಿದ್ದು, ಈ ರೈಲು ಮಂಗಳವಾರದಿಂದ ಮೂರು ದಿನ ಪ್ರಾಯೋಗಿಕ ಓಡಾಟ ನಡೆಸಲಿದೆ.











