ಬೆಂಗಳೂರು: ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ “ವಂದೇ ಭಾರತ್ ಎಕ್ಸ್‌ಪ್ರೆಸ್” ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಕಾಶಿ ವಿಶ್ವನಾಥನ ದರ್ಶನಕ್ಕೆ ಹೋಗುವವರಿಗೆ ಅನುಕೂಲವಾಗುವ ಭಾರತ್ ಗೌರವ್ ಕಾಶಿ ದರ್ಶನ

ರೈಲಿಗೂ ಇದೇ ರೈಲು ನಿಲ್ದಾಣದಲ್ಲಿ ಚಾಲನೆ ನೀಡಿದರು. ಮೈಸೂರು-ಚೆನ್ನೈ-ಬೆಂಗಳೂರು ಮಾರ್ಗವಾಗಿ ಹಾಗೂ ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಈ ರೈಲು ಸಾಗಲಿದೆ. ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಥಾಪಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ (ಪ್ರಗತಿಯ ಪ್ರತಿಮೆ) ಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು. ಇದಕ್ಕೂ ಮುನ್ನ
ದೇವನಹಳ್ಳಿ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಗೆ ಚಾಲನೆ ನೀಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಎ.ನಾರಾಯಣಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ, ಸಂಸದರಾದ ಮುನಿಸ್ವಾಮಿ, ಡಿ.ವಿ.ಸದಾನಂದ ಗೌಡ, ಸಚಿವ ಅಶ್ವತ್ಥ ನಾರಾಯಣ ಸೇರಿ ಇತರರು ಉಪಸ್ಥಿತರಿದ್ದರು.
ಸಂಪುಟ ಸಚಿವರು ಹಾಜರಿದ್ದರು.