ಮಂಗಳೂರು:ತಿರುವನಂತರಪುರಂ -ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ.ಇಂದು ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲ್ ನಂ. 20632/20631 ಇನ್ನು ಮುಂದೆ ತಿರುವನಂತಪುರಂ-ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೆ
ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರವನ್ನು ಹೊರತು ಪಡಿಸಿ ವಾರ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ವಿಸ್ತರಿಸಿ ಆದೇಶ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.