ಮಂಗಳೂರು:ಮಂಗಳೂರು-ಗೋವಾ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಓಡಾಟಕ್ಕೆ ಹಸಿರು ನಿಶಾನೆ ದೊರಕಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ದಿಂದ ಮಡಗಾಂವ್ಗೆ ವಂದೇ ಭಾರತ್ ಪ್ರಯಾಣ ಶನಿವಾರ ಆರಂಭಿಸಿತು. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು – ಮಡಗಾಂವ್ ಸೇರಿ
6 ವಂದೇ ಭಾರತ್ ಹಾಗೂ 2 ಅಮೃತ್ ಭಾರತ್ ರೈಲುಗಳಿಗೆ ಏಕ ಕಾಲದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿದರು.ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಆಯೋಜಿಸಲಾದ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭಾರತ್ ಶೆಟ್ಟಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪ ಮೇಯರ್ ಸುನೀತಾ, ಮನಪಾ ಸದಸ್ಯ ವಿನಯ್ ರಾಜ್, ಪಾಲ್ಫಾಟ್ ರೈಲ್ವೆಯ ಡಿಆರ್ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಜಯಕೃಷ್ಣನ್ ಉಪಸ್ಥಿತರಿದ್ದರು.









