ಬೆಂಗಳೂರು:ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2026ರ ಕಾರ್ಯಕ್ರಮ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿ ಸ್ಟಾಲ್ ಗಳಿಗೆ ಭೇಟಿ ನೀಡಿ ಶುಭ ಹಾರೈಸಿದರು.ಮರೆತು ಹೋದ ಖಾದ್ಯ ವಿಭಾಗದಲ್ಲಿ
ದಕ್ಷಿಣ ಕನ್ನಡ ಜಿಲ್ಲೆಯಿಂದ ಶಶ್ಮಿ ಭಟ್ ಅಜ್ಜಾವರ ಭಾಗವಹಿಸಿದ್ದು ತುಳುನಾಡಿನ ಖಾದ್ಯವನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿದರು.ಶಶ್ಮಿ ಭಟ್ ಅವರು ಮರೆತು ಹೋದ ಖಾದ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಜಂಟಿ ಕೃಷಿ
ನಿರ್ದೇಶಕರ ಕಛೇರಿ ಮಂಗಳೂರಿನ ಸಹಾಯಕ ಕೃಷಿ ನಿರ್ದೇಶಕರಾದ ಧನಲಕ್ಷ್ಮಿ ಡಿ, ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಸುಳ್ಯ ಇಲ್ಲಿಯ ತಾಲೂಕು ತಾಂತ್ರಿಕ ವ್ಯವಸ್ಥಾಪಕರಾದ ನಂದಿತಾ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾದ ಸ್ಮಿತಾ ಎಚ್. ಎನ್ ಇವರ ಸಹಕಾರದೊಂದಿಗೆ ಬೆಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.







