ಸುಳ್ಯ: ಕೆವಿಜಿ ವಿದ್ಯಾಸಂಸ್ಥೆಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ವಸಂತ ಕುರುಂಜಿಗುಡ್ಡೆ(39) ನಿಧನರಾಗಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ನಿಧನರಾದರು. ಬ್ರೈನ್ ಹ್ಯಾಮರೇಜ್ ಆಗಿ ಅಸ್ವಸ್ಥಗೊಂಡ ವಸಂತ್ ಅವರನ್ನು ಸುಳ್ಯ ಆಸ್ಪತ್ರೆಗೆ
ಕರೆತಂದು ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.ಕ್ರಿಕೆಟ್ ಪಟುವಾಗಿದ್ದ ವಸಂತ ಕುರುಂಜಿಗುಡ್ಡೆ ತಾಲೂಕಿನ ಪ್ರತಿಷ್ಠಿತ ತಂಡಗಳಲ್ಲಿ ಆಡುತ್ತಿದ್ದರು.ಮೃತರು ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಮೃತದೇಹವನ್ನು ಕೆವಿಜಿ ಪುರಭವನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಿದ ಬಳಿಕ ಮನೆಗೆ ಕೊಂಡೊಯ್ಯಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ..