ಬೆಂಗಳೂರು: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಸಂಪಾದಕ ವಸಂತ ನಾಡಿಗೇರ್ ಅವರು ಸೋಮವಾರ (ಸೆ.09) ಮುಂಜಾನೆ ನಿಧನರಾಗಿದ್ದಾರೆ. ಸುಮಾರು ಮೂರು ದಶಕಕ್ಕೂ ಹೆಚ್ಚಿನ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದ ವಸಂತ ನಾಡಿಗೇರ ಅವರು
Vasam ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ 3.15ರ ಸುಮಾರಿಗೆ ಹೃದಯಾಘಾತದಿಂದ ವಿಧಿವಶರಾದರು.
ಹಾವೇರಿ ಜಿಲ್ಲೆ ರಾಣೆಬೆನ್ನೂರಿನವರಾದ ವಸಂತ ನಾಡಿಗೇರ ಅವರು ಸಂಯುಕ್ತ ಕರ್ನಾಟಕದಲ್ಲಿ ವೃತ್ತಿ ಜೀವನ ಆರಂಭಿಸಿದ್ದರು. ಅವರು ಪತ್ನಿ, ಪುತ್ರ, ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ವಿಜಯ ಕರ್ನಾಟಕ, ವಿಶ್ವವಾಣಿ ದಿನಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು. ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಪತ್ರಕರ್ತ ವಸಂತ ನಾಡಿಗೇರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.