ಪಂಜ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ತಾಲೂಕಿನ ಪಂಜ ವಲಯದ ಕುತ್ಕುಂಜ ಕಾರ್ಯಕ್ಷೇತ್ರದ ರುಕ್ಮಿಣಿ ಇವರಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಿರ್ಮಣ ಮಾಡಿದ ವಾತ್ಸಲ್ಯ ಮನೆ ಹಸ್ತಾಂತರ ಮಾಡಲಾಯಿತು. ಹೇಮಾವತಿ ಹೆಗ್ಗಡೆ ಅವರ ಸಹೋದರಿ ಪ್ರಿಯದರ್ಶಿನಿ ಹಾಗೂ ಶ್ರೇಯಾಂಸ್ ಕುಮಾರ್ ದಂಪತಿಗಳ ಉಪಸ್ಥಿತಿಯಲ್ಲಿ ಮನೆ ಹಸ್ತಾಂತರ ಮಾಡಲಾಯಿತು.ಈ ಸಂದರ್ಭದಲ್ಲಿ
ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಸಿಲಿಕಾನ್ ಛೇಂಬರ್ನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಅಭಿವೃಧ್ಧಿ ಅಧಿಕಾರಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಭಕ್ತಾದಿಗಳಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಮಹಾ ಪೂಜೆ ಮತ್ತು ಪ್ರಾರ್ಥನಾ ಸೇವೆಯನ್ನು ನೆರವೇರಿಸಲಾಯಿತು.
ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ಎ.ಬಾಬು ನಾಯ್ಕ ಹಾಗೂ ತಾಲೂಕು ಕ್ಷೇತ್ರ ಯೋಜನಾಧಿಕಾರಿ ಮಾಧವ ಗೌಡ, ಒಕ್ಕೂಟದ ಅಧ್ಯಕ್ಷೆ ನಳಿನಿ, ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮಿ, ಲಯನ್ಸ್ ಕ್ಲಬ್ ಅಧ್ಯಕ್ಷ ಕುಮಾರಸ್ವಾಮಿ, ಮಾಜಿ ಅಧ್ಯಕ್ಷ ನಾಗೇಶ್ ಕಿನ್ನಿಕುಮೇರಿ, ಪಂಜ ಒಕ್ಕೂಟದ ವಲಯಾಧ್ಯಕ್ಷ ಧರ್ಮಪಾಲ ಕಣಕಲ್, ಪಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್, ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಹಾಗೂ ಸದಸ್ಯರು, ಪಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ಸರ್, ಸಿಎಸ್ಸಿ ತಾಲೂಕು ನೋಡೆಲ್ ಅಧಿಕಾರಿ ಹೇಮಂತ್, ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಲಕ್ಷ್ಮಿ, ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು,ಪಂಜ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಭಜನಾ ಪರಿಷತ್ ಪಂಜ ವಲಯದ ಅಧ್ಯಕ್ಷರುಗಳು, ಉಪಸ್ಥಿತರಿದ್ದರು.













