ಸುಳ್ಯ:ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಲ್ಲಿ ಎರಡನೇ ದಿನವೂ ಮಳೆಯಾಗಿದೆ. ಸುಳ್ಯ ನಗರದಲ್ಲಿ ಬೆಳಿಗ್ಗಿನಿಂದ ಮಳೆಯಾಗಿದೆ. ನಿರಂತರ ತುಂತುರು ಮಳೆಯಾಗಿತ್ತು. ಮೋಡ ಕವಿದ ವಾತಾವರಣ ಇದ್ದು ಕತ್ತಲು ಕವಿದಿದ್ದು ಕೆಲವೆಡೆ ಹನಿ ಮಳೆ, ತುಂತುರು ಮಳೆಯಾದರೆ ಕೆಲವು ಕಡೆ ಸಾಧಾರಣ ಮಳೆಯಾಗಿದೆ. ಬೆಳಿಗ್ಗಿನಿಂದ ತುಂತುರು ಮಳೆಯಾಗುತಿದೆ. ನಿರಂತರ
ಎರಡನೇ ದಿನ ಸುಳ್ಯದಲ್ಲಿ ಮಳೆಯಾಗಿದೆ. ಬುಧವಾರವೂ ಮಳೆಯಾಗಿತ್ತು.ಮಂಗಳವಾರವೂ ಮೋಡ ಕವಿದ ವಾತಾವರಣ ಇತ್ತು. ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರಾವಳಿ ಜಿಲ್ಲೆಯಾದ್ಯಂತ ಮಳೆಯಾಗುತಿದೆ. ಬುಧವಾರವು ಮಳೆಯಾಗಿತ್ತು.ಎಲ್ಲೆಡೆ ಮೋಡ ಕವಿದ ವಾತಾವರಣ ಇದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 5-6 ದಿನಗಳ ಕಾಲ ಮೋಡ ಕವಿದ ವಾತಾವರಣ ಇದ್ದು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಜನವರಿ 7ರಿಂದ 9ರವರೆಗೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂಬ ಸೂಚನೆ ನೀಡಿದೆ.














