ಸುಳ್ಯ: ಸುಳ್ಯ ಹಳೆಗೇಟು ವಿದ್ಯಾನಗರದ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ ಸಮಾಪನಾ ಸಮಾರಂಭ ಹಾಗೂ ಶ್ರೀಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ 14ರಂದು ಅಪರಾಹ್ನ ಗಂಟೆ 3ರಿಂದ ಶ್ರೀ ಕೇಶವಕಿರಣ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬ್ರಹ್ಮಶ್ರೀ ವೇದ ಮೂರ್ತಿ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ.
ಅವರು ಶನಿವಾರ ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಶ್ರೀ ಸುಬ್ರಹ್ಮಣ್ಯ ಮಠದ
ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು. ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ.ಎಸ್.ನಾಗರಾಜ ರಾವ್ ಅಧ್ಯಕ್ಷತೆ ವಹಿಸುವರು. ಮಂಗಳೂರು ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎಂ.ಬಿ.ಪುರಾಣಿಕ್ ಸನ್ಮಾನ ನೆರವೇರಿಸುವರು. ಬೆಳಾಲು ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೂಂತಾರು ಅಭಿನಂದನಾ ಭಾಷಣ ಮಾಡುವರು. ಪ್ರತಿಷ್ಠಾನದ ಗೌರವಾಧ್ಯಕ್ಷ ಎಂ.ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿರಲಿದ್ದಾರೆ. ಬ್ರಹ್ಮ ಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನ (ರಿ.) ಇಡ್ಕಿದು, ಭಾರತ ಸೇವಾದಳ ಯೋಗ ಸಂಪನ್ಮೂಲ ವ್ಯಕ್ತಿ ಆರ್.ಬಿ.ಭಂಡಾರಿ ಬೆಂಗಳೂರು, ಕಂಚಿ ಕಾಮಕೋಟಿ ಪೀಠ ಆಸ್ಥಾನದ ವಿದ್ವಾಂಸ, ವಯಲಿನ್ ಕಲಾವಿದ ವಿದ್ವಾನ್ ರಾಜೇಶ್ ಕುಂಭಕ್ಕೋಡು ಅವರಿಗೆ “ಶ್ರೀ ಕೃಶವ ಸ್ಮೃತಿ 2023 ಪ್ರಶಸ್ತಿ” ಪ್ರದಾನ ಮಾಡಲಾವುದು. ಸ್ವಾತಂತ್ರ್ಯದ ಅಮೃತಮಹೋತ್ಸವ ಅಂಗವಾಗಿ ಕೇಂದ್ರ ಸರಕಾರದಿಂದ ನಡೆಸಲಾದ ವೇದ ಪಾಠ, ಕಲಾ ಪಾಠಗಳ ಪದಕ ಹಾಗೂ ಷರ್ಟಿಫಿಕೇಟ್ ಪ್ರದಾನ ಮಾಡಲಾಗುವುದು. ಮೇ 8ರಂದು ಕ್ರೀಡೋತ್ಸವ ನಡೆಯಲಿದೆ ಎಂದರು.
ಶಿಬಿರಾಧಿಕಾರಿ ಅಕ್ಷತಾ, ಶಿಬಿರದ ಸಂಚಾಲಕ ಅಭಿರಾಮ ಶರ್ಮಾ ಸರಳಿಕುಂಜ, ಸುದರ್ಶನ ಭಟ್ ಉಜಿರೆ, ಬಲರಾಮ ಭಟ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.