ಸುಳ್ಯ:ಸುಳ್ಯ ಬಿಜೆಪಿ ಮಂಡಲ ಸಮಿತಿ ನೂತನ ಅಧ್ಯಕ್ಷರ ನೇಮಕದ ಹಿನ್ನಲೆಯಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಪ್ರಮುಖರ ಸಭೆ ನಡೆಸಿ ಅಸಹಕಾರ ಘೋಷಣೆ ಮಾಡಿರುವುದರ ಬಗ್ಗೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ. ಸುಳ್ಯ ಬಿಜೆಪಿಯಲ್ಲಿ
ಉಂಟಾದ ಬೆಳವಣಿಗೆ ಗಮನಕ್ಕೆ ಬಂದಿದೆ. ಪ್ರಮುಖರು ಸಭೆ ನಡೆಸಿ ಅವರ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಅಸ್ಟೇ. ಅದು ಸ್ವಾಭಾವಿಕ. ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿ ಒಟ್ಟಾಗಿ ಪಕ್ಷ ಸಂಘಟನೆ ಮಾಡುತ್ತೇವೆ. ಮುಂದೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮತ್ತೆ ಅಧಿಕಾರಕ್ಕೆ ಬರುವುದು ನಮ್ಮ ಮುಂದಿರುವ ಪ್ರಮುಖ ಗುರಿ. ಅದಕ್ಕಾಗಿ ಒಟ್ಟಾಗಿ ದುಡಿಯುತ್ತೇವೆ ಎಂದು ವೆಂಕಟ್ ವಳಲಂಬೆ ಹೇಳಿದರು.









