ಮೂರ್ನಾಡ್: ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಶಾಖೆ ಮೂರ್ನಾಡಿನಲ್ಲಿ ಫೆ.15ರಂದು ಉದ್ಘಾಟನೆಗೊಂಡಿತು. ಶಾಖೆಯ ಉದ್ಘಾಟನೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್ ಪೊನ್ನಣ್ಣ ನೆರವೇರಿಸಿದರು.
ಶ್ರೀ ವೆಂಕಟರಾಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ
ಅಧ್ಯಕ್ಷ ಕೆ.ಸಿ. ಸದಾನಂದ ಅಧ್ಯಕ್ಷತೆ ವಹಿಸಿದ್ದರು. ಕೊಡಗು ಗೌಡ ಸಮಾಜ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ, ಮೂರ್ನಾಡು ವರ್ತಕರ ಸಂಘದ ಅಧ್ಯಕ್ಷ ಅರುಣ್ ಅಪ್ಪಚ್ಚು, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಕೊಡಗು ಜಿಲ್ಲಾ ಚೇಂಬರ ಕಾಮರ್ಸ್ ಉಪಾಧ್ಯಕ್ಷ ನವೀನ್ ಅಂಬೆಕಲ್ಲು, ಮೂರ್ನಾಡು ಗೌಡ ಸಮಾಜದ ಅಧ್ಯಕ್ಷರು ಪಾಣತ್ತಲೆ ಟಿ.ಹರೀಶ್, ಕಾಂತೂರು-ಮೂರ್ನಾಡ್ ಪಂಚಾಯಿತಿ ಅಧ್ಯಕ್ಷ ಕುಶನ್ ರೈ, ಅತಿಥಿಗಳಾಗಿದ್ದರು.
ಸೊಸೈಟಿಯ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ನಿರ್ದೇಶಕರಾದ ನಿತ್ಯಾನಂದ ಮುಂಡೋಡಿ, ಪಿ.ಸಿ.ಜಯರಾಮ, ಸದಾನಂದ ಮಾವಜಿ, ದಾಮೋದರ ನಾರ್ಕೋಡು, ಪಿ.ಎಸ್.ಗಂಗಾಧರ, ಚಂದ್ರಾ ಕೋಲ್ಚಾರ್, ಮೋಹನ್ ರಾಮ್ ಸುಳ್ಳಿ, ದೊಡ್ಡಣ್ಣ ಬರೆಮೇಲು, ಡಾ.ಎನ್.ಜ್ಞಾನೇಶ್, ಲಕ್ಷ್ಮೀ ನಾರಾಯಣ ನಡ್ಕ, ಪ್ರೇಮಾ ಕೆ.ಎಲ್. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್, ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಮೇರ್ಕಜೆ ಮತ್ತಿತರರು ಉಪಸ್ಥಿತರಿದ್ದರು.




