ಸುಳ್ಯ:ಸುಳ್ಯದ ಗೌಡರ ಯುವ ಸೇವಾ ಸಂಘ ಪ್ರವರ್ತಿತ ಸಂಸ್ಥೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ ಫೆ.9ರಂದು ಪ್ರಧಾನ ಕಚೇರಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ.ಸದಾನಂದ ತಿಳಿಸಿದ್ದಾರೆ.
ಸಂಸ್ಥೆಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಅವರು ಪ್ರಥಮ ಸ್ಥಾಪನಾ ದಿನಾಚರಣೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ರೈಸ್ತ ಅಲ್ಪಸಂಖ್ಯಾತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಿಲಿಯಂ ಲಸ್ರಾದೋ ಹಾಗೂ ಸುಳ್ಯ ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ ಉಪಸ್ಥಿತರಿರಲಿದ್ದಾರೆ.ಸ್ಥಾಪನಾ ಸಂದರ್ಭದಲ್ಲಿ ಸಹಕರಿಸಿದ ಎಲ್ಲಾ ನಿರ್ದೇಶಕರನ್ನು ಗೌರವಿಸಲಾಗುವುದು.ಮುಂದಿನ ದಿನಗಳಲ್ಲಿ ಸಂಸ್ಥೆಯ ಬೆಳವಣಿಗೆಗೆ ಬಗ್ಗೆ ಚಿಂತನ ಮಂಥನ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಸ್ಥಾಪನೆ ಮಾಡುವ ಸಂದರ್ಭದಲ್ಲಿ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾಗಿ ನಿತ್ಯಾನಂದ ಮುಂಡೋಡಿ,ಕಾರ್ಯದರ್ಶಿಯಾಗಿ ಎ.ವಿ.ತೀರ್ಥರಾಮ, ಕೋಶಾಧಿಕಾರಿಯಾಗಿ ಪಿ.ಸಿ. ಜಯರಾಮ ನೇತೃತ್ವದ ತಂಡ ಸಹಕಾರ ಸಂಸ್ಥೆಯನ್ನು ಹುಟ್ಟು ಹಾಕಿತ್ತು. ಈ ಸಂಸ್ಥೆಯ ಮುಖ್ಯ ಪ್ರವರ್ತಕರಾದ ಪಿ.ಸಿ. ಜಯರಾಮ ಸ್ಥಾಪಕ ಅಧ್ಯಕ್ಷರಾಗಿ ಮದುವೆಗದ್ದೆ ಭೋಜಪ್ಪ ಗೌಡ ಸ್ಥಾಪಕ ಉಪಾಧ್ಯಕ್ಷರಾಗಿ ತಂಡ ಸಂಸ್ಥೆಗೆ ಭದ್ರ ಬುನಾದಿ ಹಾಕಿತ್ತು. ನಂತರ ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ, ಎ ವಿ ತೀರ್ಥರಾಮ, ಚಂದ್ರಕೋಲ್ಟಾರ್. ಕೆ ಸಿ ನಾರಾಯಣ ಗೌಡ ಅಧ್ಯಕ್ಷರಾಗಿಯೂ, ಪಿ ಎಸ್ ಗಂಗಾಧರ, ಮೋಹನ್ರಾಮ್ ಸುಳ್ಳಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ಬ್ಯಾಂಕಿನ ಅಧ್ಯಕ್ಷರಾಗಿ ಕೆ.ಸಿ. ಸದಾನಂದ ಮತ್ತು ಉಪಾಧ್ಯಕ್ಷರಾಗಿ ದಿನೇಶ್ ಮಡಪ್ಪಾಡಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಸಂಸ್ಥೆಯು 23 ಶಾಖೆಗಳನ್ನು ಹೊಂದಿದ್ದು, 24 ನೇ ಶಾಖೆ ಫೆ.15 ಕೊಡಗಿನ ಮೂರ್ನಾಡ್ನಲ್ಲಿ ಪ್ರಾರಂಭವಾಗಲಿದೆ ಎಂದು ವಿವರಿಸಿದರು.

ಸಂಘವು ಅತ್ಯುತ್ತಮವಾಗಿ ವ್ಯವಹಾರಗಳನ್ನು ಮಾಡುತ್ತಿದ್ದು ಒಟ್ಟು 22,600 ಸದಸ್ಯರು ಇದ್ದು, ವಾರ್ಷಿಕ ರೂ 1,300 ಕೋಟಿ ವ್ಯವಹಾರ ನಡೆಸುತ್ತಿದೆ. ಪ್ರತಿ ವರ್ಷವೂ ಕನಿಷ್ಠ 15% ಡಿವಿಡೆಂಟ್ ವಿತರಿಸುತ್ತಿದೆ. ಸಂಸ್ಥೆಯು ಸುಳ್ಯದಲ್ಲಿ 35.25 ಸೆಂಟ್ಸ್ ನಿವೇಶನ ಹೊಂದಿದ್ದು, ಇದರಲ್ಲಿ ಸುಳ್ಯ ಶಾಖೆ ಹಾಗೂ ಪ್ರಧಾನ ಕಛೇರಿಯನ್ನು ಒಳಗೊಂಡ ವಿಶಾಲವಾದ ವಾಣಿಜ್ಯ ಕಟ್ಟಡವನ್ನು ನಿರ್ಮಿಸಿರುತ್ತೇವೆ. ಹಾಗೂ ಹಲವು ಕೊಠಡಿಗಳನ್ನು ಬಾಡಿಗೆಗೆ ನೀಡಿರುತ್ತೇವೆ.
ಈ ಸಂಸ್ಥೆಯಲ್ಲಿ 89 ಜನ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು, ಪರೋಕ್ಷವಾಗಿ ಪಿಗ್ಮಿ ಸಂಗ್ರಾಹಕರು ಹಾಗೂ ಇತರರು ಸಂಸ್ಥೆಯ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಪ್ರಥಮ ಬಾರಿಗೆ ಸಂಸ್ಥೆಯ ಸ್ಥಾಪನಾ ದಿನಾಚರಣೆಯನ್ನು ಪ್ರಾರಂಭ ಮಾಡುತ್ತಿದ್ದು, ಇನ್ನು ಮುಂದಿನ ವರ್ಷಗಳಲ್ಲಿ ಪ್ರತಿ ವರ್ಷ ನಿಗದಿತ ದಿನ ಈ ಕಾರ್ಯಕ್ರಮ ನಡೆಯಲಿದೆ ಎಂದು ಕೆ.ಸಿ.ಸದಾನಂದ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ನಿರ್ದೇಶಕರಾದ ಪಿ.ಸಿ.ಜಯರಾಮ, ಸದಾನಂದ ಮಾವಜಿ, ದಾಮೋದರ ನಾರ್ಕೋಡು, ದೊಡ್ಡಣ್ಣ ಬರೆಮೇಲು, ಡಾ.ಎನ್.ಜ್ಞಾನೇಶ್, ಲಕ್ಷ್ಮೀ ನಾರಾಯಣ ನಡ್ಕ, ನಳಿನಿ ಸೂರಯ್ಯ, ಪ್ರೇಮಾ ಕೆ.ಎಲ್. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್, ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಮೇರ್ಕಜೆ ಉಪಸ್ಥಿತರಿದ್ದರು.







