ಸುಳ್ಯ:ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಒಟ್ಟು ರೂ. 1,582 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರವನ್ನು ನಡೆಸಿ ಈ ಸಹಕಾರಿ ವರ್ಷದಲ್ಲಿ ರೂ. 2,64,15,821.66 ನಿವ್ವಳ ಲಾಭ ಗಳಿಸಿದ್ದು,ಸದಸ್ಯರಿಗೆ ಶೇ.15 ರಷ್ಟು ಡಿವಿಡೆಂಟ್ ವಿತರಿಸುತ್ತಿದ್ದೇವೆ ಎಂದು ಸೊಸೈಟಿಯ ಅಧ್ಯಕ್ಷ ಕೆ.ಸಿ.ಸದಾನಂದ ತಿಳಿಸಿದ್ದಾರೆ. ಗೌಡ ಸಮುದಾಯ ಭವನದಲ್ಲಿ ನಡೆದ ಮಹಾಸಭೆಯ ಬಳಿಕ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘದಲ್ಲಿ ಪ್ರಸ್ತುತ 23,134 ವಿವಿಧ ವರ್ಗದ ಸದಸ್ಯರಿದ್ದು, ಇವರಿಂದ ರೂ 5.30 ಕೋಟಿ ಪಾಲು ಬಂಡವಾಳ ಸಂಗ್ರಹಿಸಿದೆ. ಸದಸ್ಯರ ಅನುಕೂಲಕ್ಕಾಗಿ ವಾಹನ ಸಾಲ, ಚಿನ್ನಾಭರಣ ಈಡಿನ ಸಾಲ, ಭದ್ರತಾ ಸಾಲ, ಗೃಹಸಾಲ, ವಾಣಿಜ್ಯ ಕಟ್ಟಡ ಸಾಲ, ಜಮೀನು ಖರೀದಿ ಸಾಲ, ಜಮೀನು ಅಡವು ಸಾಲ,ವೇತನ ಸಾಲ, ವ್ಯಾಪಾರ ಸಾಲ ಹಾಗೂ ಜಾಮೀನು ಸಾಲಗಳನ್ನು ನೀಡುತ್ತಿದೆ. ಹಾಗೇಯೇ ಇ-ಸ್ಟಪಿಂಗ್ ವಿತರಣೆ, RTGS/NEFT ಸೌಲಭ್ಯವನ್ನು ನೀಡುತ್ತಿದ್ದೇವೆ. ಸಂಸ್ಥೆಯ ಕಾರ್ಯವ್ಯಾಪ್ತಿಯು ರಾಜ್ಯಮಟ್ಟದಾಗಿದ್ದು, ಸಂಘವು ಈಗಾಗಲೇ ರಾಜ್ಯದ ವಿವಿಧ ಭಾಗಗಳಲ್ಲಿ 24 ಶಾಖೆಗಳನ್ನು ಆರಂಭಿಸಿ ವ್ಯವಹಾರ ನಡೆಸುತ್ತಿದೆ. ಸಂಘದ ಮುಂದಿನ 25ನೇ ಶಾಖೆಯಾಗಿ ಸುಳ್ಯ ತಾಲೂಕಿನ ಗುತ್ತಿಗಾರ್ನಲ್ಲಿ ಶೀಘ್ರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದರು.
ಲಸಂಘವು ರೂ 278.92 ಕೋಟಿ ಠೇವಣಿ ಹೊಂದಿದ್ದು, ರೂ 260.77 ಕೋಟಿ ಸಾಲಗಳನ್ನು ಸದಸ್ಯರುಗಳಿಗೆ ವಿತರಿಸಿರುತ್ತದೆ.ಸಂಘದ ಹೆಚ್ಚಿನ ಎಲ್ಲಾ ಶಾಖೆಗಳಲ್ಲಿ ಇ ಸ್ಟಾಂಪಿಂಗ್ ವಿತರಣೆ ಮಾಡುತ್ತಿದ್ದು, ಸುಳ್ಯ ಶಾಖೆಯಲ್ಲಿ ಸೇಫ್ ಡಿಪಾಸಿಟ್ ಲಾಕರ್ ಸೌಲಭ್ಯವನ್ನು ಸದಸ್ಯರಿಗೆ ನೀಡಲಾಗುತ್ತಿದೆ.ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಅವರ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಮಾಡಲಾಗುತ್ತಿದೆ ಎಂದು ಕೆ.ಸಿ ಸದಾನಂದ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್,ನಿರ್ದೇಶಕರಾದ ಪಿ.ಸಿ.
ಜಯರಾಮ, ಜಾಕೆ ಸದಾನಂದ, ನಿತ್ಯಾನಂದ ಮಂಡೋಡಿ,ಎ.ವಿ. ತೀರ್ಥರಾಮ,ಚಂದ್ರ ಕೋಲ್ಚಾರ್, ಪಿ.ಎಸ್. ಗಂಗಾಧರ, ಮೋಹನ್ರಾಮ್ ಸುಳ್ಳಿ, ಲಕ್ಷ್ಮೀನಾರಾಯಣ ನಡ್ಕ, ದಾಮೋದರ ನಾರ್ಕೋಡು, ಜಯಲಲಿತಾ ಕೆ.ಎಸ್. ನಳಿನಿ ಸೂರಯ್ಯ, ಶೈಲೇಶ್ ಅಂಬೆಕಲ್ಲು,ದೊಡ್ಡಣ್ಣ ಬರೆಮೇಲು,ಸದಾನರದ ಮಾವಜಿ, ಪ್ರೇಮ ಕೆ ಎಲ್. ಜ್ಞಾನೇಶ್ ಎನ್.ಎ. ಉಪಸ್ಥಿತರಿದ್ದರು.










