ಸುಳ್ಯ:ಸುಳ್ಯದ ಗೌಡರ ಯುವ ಸೇವಾ ಸಂಘ ಪ್ರವರ್ತಿತ ಸಂಸ್ಥೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ ಫೆ.9ರಂದು ಪ್ರಧಾನ ಕಚೇರಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.ಕ್ರೈಸ್ತ ಅಲ್ಪಸಂಖ್ಯಾತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಿಲಿಯಂ ಲಸ್ರಾದೋ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ
ಅಧ್ಯಕ್ಷ ಕೆ.ಸಿ.ಸದಾನಂದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಸುಳ್ಯ ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ, ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ, ನಿತ್ಯಾನಂದ ಮುಂಡೋಡಿ, ನಿರ್ದೇಶಕರಾದ ಜಾಕೆ ಸದಾನಂದ, ಪಿ.ಎಸ್.ಗಂಗಾಧರ ಮತ್ತಿತರರು ಮಾತನಾಡಿದರು.

ಸಂಘದ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ನಿರ್ದೇಶಕರಾದ ಸದಾನಂದ ಮಾವಜಿ, ದಾಮೋದರ ನಾರ್ಕೋಡು, ಕೆ.ಸಿ ನಾರಾಯಣ ಗೌಡ , ಚಂದ್ರ ಕೋಲ್ಚಾರ್
ದೊಡ್ಡಣ್ಣ ಬರೆಮೇಲು, ಡಾ.ಎನ್.ಜ್ಞಾನೇಶ್, ಲಕ್ಷ್ಮೀ ನಾರಾಯಣ ನಡ್ಕ, ನಳಿನಿ ಸೂರಯ್ಯ, ಶೈಲೇಶ್ ಅಂಬೆಕಲ್ಲು, ಪ್ರೇಮಾ ಕೆ.ಎಲ್. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್, ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಮೇರ್ಕಜೆ ಉಪಸ್ಥಿತರಿದ್ದರು.
ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಟಿ.ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು.







