ಸುಳ್ಯ:ಮಂಗಳೂರು-ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರಿಗೆ ವಿಸ್ತರಿಸಿದ್ದು ಏ. 12 ರಂದು ಸಂಜೆ 4 ಗಂಟೆಗೆ ರೈಲು ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ. ಕೇಂದ್ರ ಸಚಿವರು,ಸಂಸದರು, ಪ್ರಮುಖರು 5.30ರ ವೇಳೆಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ರೈಲು ಮೂಲಕ ಅಗಮಿಸಲಿದ್ದಾರೆ.ಈ ವೇಳೆ ಕಾರ್ಯಕರ್ತರು,ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೈಲಿಗೆ
ಸ್ವಾಗತ ನೀಡಬೇಕು ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮನವಿ ಮಾಡಿದ್ದಾರೆ. ರೈಲು ವಿಸ್ತರಿಸಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಸಾವಿರಾರು ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದೆ.ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಸಾವಿರಾರು ಯಾತ್ರಾರ್ಥಿಕರು ಅಗಮಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ರು,ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮತ್ತು ಸಂಸದ ಕ್ಯಾ.ಬ್ರಿಜೇಶ್ ಚೌಟರು ವಿಶೇಷ ಮುತುವರ್ಜಿಯಿಂದ ಬಹುಕಾಲದಬೇಡಿಕೆ ಇಡೇರುತ್ತಿದೆ. ಈ ಹಿನ್ನಲೆಯಲ್ಲಿ ಕೇಂದ್ರ ರೈಲ್ವೇ ಸಚಿವರನ್ನು ಮತ್ತು ಸಂಸದ ಕ್ಯಾ.ಬ್ರಿಜೇಶ್ ಚೌಟ ರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.





