ಸುಳ್ಯ:ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸೊಸೈಟಿಯು ಈ ವರ್ಷ ಸದಸ್ಯರಿಗೆ ಶೇ.15 ಡಿವಿಡೆಂಟ್ ನೀಡಲು ನಿರ್ಧರಿಸಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ತಿಳಿಸಿದ್ದಾರೆ.ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆದ ಮಹಾಸಭೆಯ ಬಳಿಕ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.1997ರಲ್ಲಿ ಗೌಡರ ಯುವ ಸೇವಾ ಸಂಘದ
ನೇತೃತ್ವದಲ್ಲಿ ಪ್ರಾರಂಭವಾದ ಈ ಸಂಘದಲ್ಲಿ ಪ್ರಸ್ತುತ 19,462 ವಿವಿಧ ವರ್ಗದ ಸದಸ್ಯರಿದ್ದು, ಇವರಿಂದ ರೂ 4.77 ಕೋಟಿ ಪಾಲು ಬಂಡವಾಳ ಸಂಗ್ರಹಿಸಿದೆ. ಸದಸ್ಯರ ಅನುಕೂಲಕ್ಕಾಗಿ ವಾಹನ ಸಾಲ, ಚಿನ್ನಾಭರಣ ಈಡಿನ ಸಾಲ, ಭದ್ರತಾ ಸಾಲ, ಗೃಹಸಾಲ, ವಾಣಿಜ್ಯ ಕಟ್ಟಡ ಸಾಲ. ಜಮೀನು ಖರೀದಿ ಸಾಲ, ಜಮೀನು ಅಡವು ಸಾಲ, ವೇತನ ಸಾಲ, ವ್ಯಾಪಾರ ಸಾಲ ಹಾಗೂ ಜಾಮೀನು ಸಾಲಗಳನ್ನು ನೀಡುತ್ತಿದ್ದು, ಹಾಗೇಯೇ ಇ-ಸ್ಟಾಂಪಿಂಗ್ ವಿತರಣೆ, RTGS/NEFT ಸೌಲಭ್ಯವನ್ನು ನೀಡುತ್ತಿದ್ದೇವೆ. ಸಂಸ್ಥೆಯ ಕಾರ್ಯವ್ಯಾಪ್ತಿಯು ರಾಜ್ಯಮಟ್ಟದಾಗಿದ್ದು, ಸಂಘವು ಈಗಾಗಲೇ ರಾಜ್ಯದ ವಿವಿಧ ಭಾಗಗಳಲ್ಲಿ 23 ಶಾಖೆಗಳನ್ನು
ಆರಂಭಿಸಿ ವ್ಯವಹಾರ ನಡೆಸುತ್ತಿದೆ.ವರದಿ ವರ್ಷದಲ್ಲಿ ನಮ್ಮ ಸಹಕಾರಿ ಸಂಘವು ರೂ 194.82 ಕೋಟಿ ಠೇವಣಿ ಹೊಂದಿದ್ದು, ರೂ 185.42 ಕೋಟಿ ಸಾಲಗಳನ್ನು ಸದಸ್ಯರುಗಳಿಗೆ ವಿತರಿಸಿರುತ್ತದೆ. ದುಡಿಯುವ ಬಂಡವಾಳರೂ 210.20 ಕೋಟಿ ಇದ್ದು ಒಟ್ಟು ರೂ. 1,060 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರವನ್ನು ನಡೆಸುತ್ತಿದ್ದೇವೆ. ಸಂಘದಲ್ಲಿ ಒಟ್ಟು ರೂ. 3,11,74,230.46 ಕ್ಷೇಮ ನಿಧಿ ಹಾಗೂ 6,8123743 ಇತರ ನಿಧಿ ಇರುತ್ತದೆ. ಪ್ರಸ್ತುತ ಸಂಘದಲ್ಲಿ
4,05,63,571.37 ಮೌಲ್ಯದ ಚರಾಸ್ತಿ ಹಾಗೂ 2,18,08,469.32 ಸ್ಥಿರಾಸ್ತಿ ಇರುತ್ತದೆ. ಸಂಘಕ್ಕೆ ಸುಳ್ಯದ ಮೊಗರ್ಪಣೆಯಲ್ಲಿ ಮುಖ್ಯ ರಸ್ತೆ ಪಕ್ಕ 33.50 ಸೆಂಟ್ಸ್ ಸ್ವಂತ ಸ್ಥಳ ಇದ್ದು, ಈ ಜಾಗದಲ್ಲಿ ಸಂಘಕ್ಕೆ ಸುಸಜ್ಜಿತವಾದ ವಾಣಿಜ್ಯ ಮಳಿಗೆಗಳನ್ನೊಳಗೊಂಡ ಕಟ್ಟಡವನ್ನು ನಿರ್ಮಿಸಿರುತ್ತೇವೆ. ನೆಲ ಅಂತಸ್ತಿನಲ್ಲಿ ಸುಳ್ಯ ಶಾಖೆ ಕಾರ್ಯ ನಿರ್ವಹಿಸುತ್ತಿದ್ದು, 1 ನೇ ಮಹಡಿಯಲ್ಲಿ ವಿಶಾಲವಾದ ಎಲ್ಲಾ ಸೌಲಭ್ಯಗಳನ್ನು ಒಳಗೊಂಡ ಆಡಳಿತ ಕಛೇರಿ. ಸಭಾಭವನ, ಅತಿಥಿಗೃಹ ನಿರ್ಮಿಸಿರುತ್ತೇವೆ. ಸಂಘದ ಹೆಚ್ಚಿನ ಎಲ್ಲಾ ಶಾಖೆಗಳಲ್ಲಿ ಇ ಸ್ಟಾಂಪಿಂಗ್ ವಿತರಣೆ ಮಾಡುತ್ತಿದ್ದು
ಸುಳ್ಯ ಶಾಖೆಯಲ್ಲಿ ಸೇಫ್ ಡಿಪಾಸಿಟ್ ಲಾಕರ್ ವ್ಯವಸ್ಥೆ ಸೌಲಭ್ಯ ದೊರೆಯುತ್ತಿದೆ. ಪ್ರಸ್ತುತ ವರ್ಷದಲ್ಲಿ 2,01,35,415 ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ.15 ರಷ್ಟು ಡಿವಿಡೆಂಟ್ ವಿತರಿಸುತ್ತಿದ್ದೇವೆ. ಅಲ್ಲದೇ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 95 ಕ್ಕಿಂತ ಅಧಿಕ ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರ ಶಿಕ್ಷಣಕ್ಕೆ ಸಹಕಾರ ನೀಡಲಾಗುತಿದೆ. ಸಂಘವು ಜನರಲ್ಲಿ ಉಳಿತಾಯ ಮನೋಭಾವನೆಯನ್ನು ಬೆಳೆಸಿದೆ. ಕೃಷಿಕರು, ವ್ಯಾಪಾರಸ್ಥರಿಗೆ ಸಾಲ ಸೌಲಭ್ಯ ಒದಗಿಸುವುದು, ಮತ್ತು ಆರ್ಥಿಕವಾಗಿ ಹಿಂದುಳಿದವರ ಪ್ರಗತಿಗೆ ನೆರವಾಗುವ ಉದ್ದೇಶವನ್ನು ಹೊಂದಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸೊಸೈಟಿಯ ಉಪಾಧ್ಯಕ್ಷ ಮೋಹನ್ರಾಂ ಸುಳ್ಳಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ,
ನಿರ್ದೇಶಕರಾದ ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ, ಎ.ವಿ ತೀರ್ಥರಾಮ, ಚಂದ್ರ ಕೋಲ್ದಾರ್, ಕೆ.ಸಿ ನಾರಾಯಣ ಗೌಡ, ಕೆ.ಸಿ ಸದಾನಂದ, ಪಿ.ಎಸ್. ಗಂಗಾಧರ, ದಿನೇಶ ಮಡಪ್ಪಾಡಿ, ದಾಮೋದರ ನಾರ್ಕೋಡು, ಹೇಮಚಂದ್ರ ಐ ಕೆ. ನವೀನ್ ಕುಮಾರ್ ಶೈಲೇಶ್ ಅಂಬೆಕಲ್ಲು, ಜಯಲಲಿತಾ ಕೆ.ಎಸ್, ಲತಾ ಎಸ್ ಮಾವಜಿ, ನಳಿನಿ ಸೂರಯ್ಯ ಉಪಸ್ಥಿತರಿದ್ದರು.