ಸುಳ್ಯ:ರಾಜ್ಯ ಸರಕಾರ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದು ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಟಿ.ಎಂ.ಶಾಹಿದ್ ತೆಕ್ಕಿಲ್ ರಾಜ್ಯ ಸರಕಾರದಿಂದ ನೇಮಕಗೊಂಡಿದ್ದಾರೆ. ಕೆ.ಪಿಸಿ.ಸಿ ಪ್ರಧಾನ ಕಾರ್ಯದರ್ಶಿಯಾಗಿರುವ
ಶಾಹಿದ್ ತೆಕ್ಕಿಲ್ ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕರು, ತೆಕ್ಕಿಲ್ ಶಿಕ್ಷಣ ಸಂಸ್ಥೆ ಗೂನಡ್ಕ ಸಂಪಾಜೆ ಇದರ ಸ್ಥಾಪಕಾಧ್ಯಕ್ಷ, ಪೇರಡ್ಕ ಮಸೀದಿ ಮತ್ತು ದರ್ಗಾದ ಅಧ್ಯಕ್ಷರಾಗಿದ್ದಾರೆ. ಎನ್ಎಸ್ಯುಐ, ಯುವ ಕಾಂಗ್ರೆಸ್ ಸಮಿತಿ, ಅಲ್ಪಸಂಖ್ಯಾತರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಕಾರ್ಯದರ್ಶಿ, ಕೆಪಿಸಿಸಿ ವಕ್ತಾರರಾಗಿ, ಸುಳ್ಯ ತಾಲ್ಲೂಕು ಅಲ್ಪ ಸಂಖ್ಯಾತರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಎರಡು ಬಾರಿ ಕೇಂದ್ರ ನಾರು ಮಂಡಳಿ ಸದಸ್ಯರಾಗಿ, ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯರಾಗಿ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ರಾಜ್ಯ ವಖ್ಫ್ ಕೌನ್ಸಿಲ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.














