ನವದೆಹಲಿ:ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್ಗೆ ಪ್ರಮಾಣವಚನ ಬೋಧಿಸಿದರು.ಈ ಸಂದರ್ಭದಲ್ಲಿ
ಮಾಜಿ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್, ವೆಂಕಯ್ಯ ನಾಯ್ಡು, ಹಮೀದ್ ಅನ್ಸಾರಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಹುದ್ದೆಗೆ ಮಂಗಳವಾರ (ಸೆ.9) ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಧಾಕೃಷ್ಣನ್ ಜಯ ಗಳಿಸಿದ್ದರು.












