ಪುತ್ತೂರು: ಹಲವಾರು ಸರಕಾರಿ ನೇಮಕಾತಿಗಳಲ್ಲಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ನೇಮಕಾತಿಗೊಳ್ಳುವಂತೆ ಮಾಡಿದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಕೇಂದ್ರ ಕಛೇರಿ ಪುತ್ತೂರಿನಲ್ಲಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಿಯುಸಿ,ಪದವಿ ವ್ಯಾಸಂಗದ ನಂತರದ ಅವಕಾಶಗಳ ಕುರಿತಾಗಿ ಒಂದು ದಿನದ ಮಾಹಿತಿ ಕಾರ್ಯಾಗಾರ ನಡೆಯಿತು.ಸ್ಪರ್ಧಾತ್ಮಕ ಪರೀಕ್ಷೆಗಳ
ಖ್ಯಾತ ತರಬೇತುದಾರ ಹಾಗೂ ಶಿಕ್ಷಣ ತಜ್ಞ ಅರವಿಂದ ಚೊಕ್ಕಾಡಿ ಕಾರ್ಯಾಗಾರವನ್ನು ಉದ್ಘಾಟಿಸಿದರು ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಾಗಾರವನ್ನು ನಡೆಸಿಕೊಟ್ಟರು, ಇದೇ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಪ್ರಸ್ತಾವಿಕವಾಗಿ ಮಾತನಾಡಿ ಖಾಸಗಿ ಮತ್ತು ಸರಕಾರಿ ವಲಯದ ಉದ್ಯೋಗಗಳ ಮಹತ್ವವನ್ನು ವಿವರಿಸಿ, ವಿದ್ಯಾಮಾತಾ ಅಕಾಡೆಮಿಯಲ್ಲಿರುವ ಅವಕಾಶಗಳ ಕುರಿತು ಬೆಳಕು ಚೆಲ್ಲಿದರು. ನಂತರದಲ್ಲಿ ಅರವಿಂದ ಚೊಕ್ಕಾಡಿರವರು ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.
ವಿದ್ಯಾಮಾತಾ ಅಕಾಡೆಮಿ ಪ್ರತಿನಿತ್ಯ ಉಚಿತ ಕೌನ್ಸ್ಲಿಂಗ್:
ಉದ್ಯೋಗಾದರಿತವಾಗಿ ಮಾಹಿತಿಗಳ ಕೊರತೆಯಿಂದ ಹಲವಾರು ನೇಮಕಾತಿ ಪ್ರಕ್ರಿಯೆಗಳಲ್ಲಿ ಅವಕಾಶ ಕಳೆದುಕೊಳ್ಳುವುದನ್ನು ತಪ್ಪಿಸುವ ಸಲುವಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ಪ್ರತಿನಿತ್ಯ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಕೌನ್ಸ್ಲಿಂಗ್ ನಡೆಯಲಿದೆ. ಆಸಕ್ತರು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಲು ಪ್ರಕಟಣೆ ತಿಳಿಸಿದೆ.
ವಿದ್ಯಾಮಾತಾ ಅಕಾಡೆಮಿ
ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
PH: 9148935808 / 96204 68869
ಸುಳ್ಯ ಶಾಖೆ: ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
PH: 9448527606





