ಸುಳ್ಯ:2025-26ನೇ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇಕಡಾ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಘಟಕದ ವತಿಯಿಂದ
ಗೌರವಾರ್ಪಣೆ ಕಾರ್ಯಕ್ರಮ ಸುಳ್ಯ ಕನ್ನಡ ಭವನದಲ್ಲಿ ನಡೆಯಿತು. ಕಸಾಪ ಸುಳ್ಯ ಘಟಕದ
ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ಎಒಎಲ್ಇ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮಾಡಿದರು.ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸ್ವರ್ಣಕಲಾ ಎ.ಎಸ್., ಕ್ಷೇತ್ರ ಶಿಕ್ಷಣ ಸಂಯೋಜಕ ನಾರಾಯಣ ಮುಖ್ಯ ಅತಿಥಿಗಳಾಗಿದ್ದರು.
ತಾಲೂಕಿಗೆ ಪ್ರಥಮ, ದ್ವಿತೀಯ ಬಂದ ವಿದ್ಯಾರ್ಥಿಗಳನ್ನು, ಕನ್ನಡ ಭಾಷಾ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು, ಕನ್ನಡ ಭಾಷಾ ಶಿಕ್ಷಕರನ್ನು ಸನ್ಮಾನಿಸಲಾಯಿತು.ಸರಕಾರಿ ಶಾಲೆಗಳಲ್ಲಿ ಕನ್ನಡದಲ್ಲಿ ಶೇಕಡಾ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಪುರಸ್ಕಾರ ವಿತರಿಸಲಾಯಿತು. ಕಸಾಪ ಸುಳ್ಯ
ಹೋಬಳಿ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಕಸಾಪ ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ, ಚಂದ್ರಮತಿ ಕೆ.,ಗೌ.ಕೋಶಾಧಿಕಾರಿ ದಯಾನಂದ ಆಳ್ವ ಉಪಸ್ಥಿತರಿದ್ದರು. ಕನ್ನಡ ಭಾಷಾ ವಿಷಯದಲ್ಲಿ ಶೇ 100 ಅಂಕ ಪಡೆದ ವಿದ್ಯಾರ್ಥಿಗಳು, ಪೋಷಕರು, ಶಾಲಾ ಮುಖ್ಯಸ್ಥರು, ಕನ್ನಡಾಭಿಮಾನಿಗಳು, ಕಸಾಪ ಸದಸ್ಯರು ಉಪಸ್ಥಿತರಿದ್ದರು.
ತೇಜಸ್ವಿ ಕಡಪಳ ಸ್ವಾಗತಿಸಿ, ಕಸಾಪ ಸದಸ್ಯರಾದ ಲತಾಶ್ರೀ ಸುಪ್ರೀತ್ ಮೋಂಟಡ್ಕ ಸನ್ಮಾನಿತರ ಪಟ್ಟಿ ವಾಚಿಸಿದರು.ರಮೇಶ್ ನೀರಬಿದಿರೆ ವಂದಿಸಿದರು. ಚಂದ್ರಮತಿ ಕೆ. ಕಾರ್ಯಕ್ರಮ ನಿರೂಪಿಸಿದರು.













