ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಮರುದಿನವೇ ಮಾಜಿ ಸಿಎಂ, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಹಾಗೂ
ಇತರ ನಾಯಕರನ್ನು ಭೇಟಿಯಾಗಿದ್ದಾರೆ.ಚೆನ್ನೈನಲ್ಲಿರುವ ಸ್ಟಾಲಿನ್ ಅವರ ನಿವಾಸಕ್ಕೆ ವಿಜಯ್ ಭೇಟಿ ನೀಡಿದ್ದಾರೆ. ಉಭಯ ನಾಯಕರು ಕೆಲಕಾಲ ಮಾತುಕತೆ ನಡೆಸಿದ್ದಾರೆ.ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ ವಿಜಯ್, ಸ್ಟಾಲಿನ್, ವೈಕೋ, ಅನ್ಪುಮಣಿ ರಾಮ್ದಾಸ್ ಸೇರಿದಂತೆ ಪ್ರಮುಖ ಹಿರಿಯ ನಾಯಕರನ್ನು ಭೇಟಿ ಮಾತುಕತೆ ನಡೆಸಿದರು.











