ಚೆನ್ನೈ: ತಮಿಳುನಾಡಿನ ಖ್ಯಾತ ನಟ ಹಾಗೂ ಡಿಎಂಡಿಕೆ ಸಂಸ್ಥಾಪಕ ನಾಯಕ ವಿಜಯಕಾಂತ್ ಗುರುವಾರ ಬೆಳಗ್ಗೆ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು.ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆ ಎದುರಾಗಿದ್ದರಿಂದ ಐಸಿಯುನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. 1979ರಲ್ಲಿ ತೆರೆಕಂಡ
ಇನಿಕ್ಕುಮ್ ಇಳಮೈ ಸಿನಿಮಾದ ಮೂಲಕ ಅವರು ಸಿನಿಮಾರಂಗಕ್ಕೆ ಕಾಲಿಟ್ಟ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು. 2005ರಲ್ಲಿ ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ರಾಜಕೀಯ ಪಕ್ಷ ಸ್ಥಾಪನೆ ಮಾಡಿದರು. ಎರಡು ಬಾರಿ ತಮಿಳುನಾಡು ವಿಧಾನಸಭಾ ಸದಸ್ಯರಾಗಿದ್ದ ಅವರು ವಿರೋಧ ಪಕ್ಷದ ನಾಯಕರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. 2015ರಲ್ಲಿ ತೆರೆಕಂಡ ತಮಿಳಿನ ‘ಶತಾಬ್ದಂ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.ಎಂಭತ್ತು ಹಾಗೂ ತೊಂಬತ್ತರ ದಶಕಗಳಲ್ಲಿ ಹಲವಾರು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದ ವಿಜಯಕಾಂತ್ ಸೂಪರ್ ಸ್ಟಾರ್ ಆಗಿ ಮಿಂಚಿದ್ದರು.









