ಮಂಗಳೂರು: ಮಂಗಳೂರಿಗೆ ಆಗಮಿಸಿದ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರನ್ನು ಸುಳ್ಯದ ಮುಖಂಡರು ಅಭಿನಂದಿಸಿದರು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಶುಭೋದ್ ಶೆಟ್ಟಿ ಮೇನಾಲ, ಕಾರ್ಯದರ್ಶಿ ಶ್ರೀನಾಥ್ ಬಾಳಿಲ ಮತ್ತಿತರರು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ವಿಜಯೇಂದ್ರ ಅವರು ಮೊದಲ ಬಾರಿಗೆ ನ.22 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









