ನವದೆಹಲಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ.ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ.ಯಡಿಯೂರಪ್ಪ ಅವರ ಪುತ್ರರಾಗಿರುವ ವಿಜಯೇಂದ್ರ ಅವರಿಗೆ ಬಿಜೆಪಿ ಸಾರಥ್ಯ ಒಲಿದಿದ್ದು ಕರ್ನಾಟಕದಲ್ಲಿ ಮುಂದಿನ ಲೋಕಸಭಾ ಚುನಾವಣೆ ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿದೆ. ಕಳೆದ 3 ವರ್ಷಗಳಿಂದ ರಾಜ್ಯಾಧ್ಯಕ್ಷರಾಗಿದ್ದ ನಳಿನ್ಕುಮಾರ್ ಕಟೀಲ್ ಅವರ ಅಧ್ಯಕ್ಷ ಅವಧಿ ಮುಗಿದ ಹಿನ್ನಲೆಯಲ್ಲಿ ಹೊಸ ಅಧ್ಯಕ್ಷರ ನೇಮಕ ಮಾಡಲಾಗಿದೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ವಿಜಯೇಂದ್ರ ಅವರು ಈ ಹಿಂದೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದರು









