ನವದೆಹಲಿ: ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ಬಳಿಕ ಬಿ.ವೈ.ವಿಜಯೇಂದ್ರ ಅವರು ಡಿ.2ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದರು.
ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ
ಪೀಳಿಗೆಯನ್ನು ಉತ್ತೇಜಿಸುತ್ತಿರುವ ನಡ್ಡಾ ಅವರು ನನ್ನ ಬಗ್ಗೆ ಇರಿಸಿರುವ ಅಚಲ ನಂಬಿಕೆಯ ನುಡಿಗಳು ಅದಮ್ಯ ಆತ್ಮವಿಶ್ವಾಸದ ಉತ್ಸಾಹ ಮೂಡಿಸುವುದರೊಂದಿಗೆ, ಬಹು ದೊಡ್ಡ ಹೊಣೆಗಾರಿಕೆಯನ್ನೂ ನೆನಪಿಸಿತು ಎಂದು ವಿಜಯೇಂದ್ರ ತಿಳಿಸಿದ್ದಾರೆ.
ವರಿಷ್ಠರು ಇರಿಸಿರುವ ನಿರೀಕ್ಷೆಯ ಗುರಿ ತಲುಪುವುದೇ ನನ್ನ ಮಹಾ ಸಂಕಲ್ಪವಾಗಿದೆ ಎಂದು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರು ಉಪಸ್ಥಿತರಿದ್ದರು.