ಪುತ್ತೂರು:ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ.ಅಭಿವೃದ್ಧಿಗೆ ಯಾವುದೇ ಅನುದಾನ ಬಿಡುಗಡೆಯಾಗುತ್ತಾ ಇಲ್ಲ.
ಜನರು ಕಾಂಗ್ರೆಸ್ ಸರಕಾರದ ಮೇಲೆ ಭರವಸೆ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದರು.ಅವರು ಬುಧವಾರ ಪುತ್ತೂರಿನಲ್ಲಿ ಮಾದ್ಯಮದೊಂದಿಗೆ ಮಾತನಾಡುತ್ತಾ ಕೇವಲ
ಮುಖ್ಯಮಂತ್ರಿ ಕುರ್ಚಿಗೆ ಮಾತ್ರ ಪೈಪೋಟಿ ಜೋರಾಗಿದೆ. ಸಚಿವರು, ಮುಖ್ಯಮಂತ್ರಿಗಳು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಮುಖ್ಯಮಂತ್ರಿ ಕುರ್ಚಿಗೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಇದರಿಂದ ರಾಜ್ಯದ ಜನ ಕಾಂಗ್ರೆಸ್ ಸರಕಾರದ ಮೇಲೆ ಭರವಸೆ ಕಳೆದುಕೊಂಡಿದ್ದಾರೆ. ರಾಜ್ಯದ ರೈತರು, ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ.ಮೆಕ್ಕೆ ಜೋಳ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ, ರಾಜ್ಯ ಸರ್ಕಾರ ತಡ ಮಾಡಿದೆ ಎಂದು ಹೋರಾಟ ನಡೆಯುತ್ತಿದೆ.
ಕಾಂಗ್ರೆಸ್ ಸರಕಾರ ಜನರ ಭರವಸೆ ಈಡೇರಿಸಿದೇ ಮೋಸ ಮಾಡಿದೆ.ಈ ರೀತಿ ಮುಂದುವರಿದರೆ ಕಾಂಗ್ರೆಸ್ ಸರಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ವಿಜಯೇಂದ್ರ ಹೇಳಿದರು.





