ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಜೂ. 26 ರಂದು ಬೆಳಗ್ಗೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ವಿಜಯೇಂದ್ರ ಅವರು ಪಕ್ಷದ ಮುಖಂಡರು ಹಾಗೂ
ಕಾರ್ಯಕರ್ತರೊಂದಿಗೆ ದೇವಸ್ಥಾನದಲ್ಲಿ ದರ್ಶನ ಪಡೆದರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದರ್ಶನದ ನಂತರ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತಿತರರು ಇದ್ದರು.






