ಸುಬ್ರಹ್ಮಣ್ಯ:ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ
ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸಿದ್ದಾರೆ. ಧರ್ಮಸ್ಥಳ ಕ್ಷೇತ್ರ ದರ್ಶನ ಪಡೆದು ಸೋಮವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಅವರನ್ನು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮತ್ತಿತರರು ಸೇರಿ ಸ್ವಾಗತಿಸಿದರು. ವಿಜಯೇಂದ್ರ ಅವರು ದೇವಸ್ಥಾನದಲ್ಲಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.











