ಅಜ್ಜಾವರ: ಕೇಂದ್ರ ಸರಕಾರದ ವಿಕಸಿತ ಭಾರತ್ ಸಂಕಲ್ಪ ಯಾತ್ರೆಗೆ ಸ್ವಾಗತ ಮತ್ತು ಸಭಾ ಕಾರ್ಯಕ್ರಮ ಅಜ್ಜಾವರ ಗ್ರಾಮದ ಮೇನಾಲ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮಾಜಿ ಶಾಸಕರಾದ ನಂದೀಶ್ ರೆಡ್ಡಿ ಉದ್ಘಾಟನೆ ನೆರವೇರಿಸಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು ಕನಿಷ್ಠ ಒಂದು ಗ್ರಾಮದಲ್ಲಿ 500ರಷ್ಟು ಜನತೆ ವಿಕಸಿತ ಭಾರತದ
ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ’ ಪ್ರತಿ ಗ್ರಾಮ ಪಂಚಾಯತ್ ಇದನ್ನು ಗಂಭೀರವಾಗಿ ಪರಿಗಣಿಸಿ ಜನತೆಗೆ ಮಾಹಿತಿ ಮತ್ತು ಇದರ ಸದುಪಯೋಗಳ ಕುರಿತಾಗಿ ಮಾಹಿತಿ ನೀಡಿದ್ದಲ್ಲಿ ಕೇಂದ್ರದ ಯೋಜನೆ ನೇರವಾಗಿ ಜನರಿಗೆ ಸಿಗಲಿದೆ ಎಂದು ಹೇಳಿದರು. ಅಲ್ಲದೇ ಈ ಯೋಜನೆಯನ್ನು ಗ್ರಾಮ ಪಂಚಾಯತ್ ಪರಿಣಾಮಕಾರಿಯಾಗಿ ಬ್ಯಾಂಕ್ ಜೊತೆಗೆ ಕೈ ಜೋಡಿಸಿ ಅನುಷ್ಠಾನ ಮಾಡಬೇಕು ಎಂದರು.
ನಗರ ಪಂಚಾಯತ್ ಮಾಜಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ , ಜಿ.ಪಂ.ಮಾಜಿ ಸದಸ್ಯ ಹರೀಶ್ ಕಂಜಿಪಿಲಿ , ತಾ.ಪಂ.ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸತ್ಯವತಿ ಬಸವನಪಾದೆ , ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜಯಮಾಲ ಎ ಕೆ , ಯೂನಿಯನ್ ಬ್ಯಾಂಕ್ ಮೇನೆಜರ್ ಅಜಯ್ ಕುಮಾರ್ , ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ವಿನಯ ಕುಮಾರ್ ಕಂದಡ್ಕ ಮತ್ತು ಅಜಯ್ ಕುಮಾರ್ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಕೃಷಿ , ಕ್ರೀಡೆ , ದೇಶಸೇವೆ , ಉದ್ಯಮ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು . ಬಾಲಕೃಷ್ಣ ಮೇನಾಲ ಕಾರ್ಯಕ್ರಮ ನಿರೂಪಿಸಿದರು.









