ಪ್ಯಾರಿಸ್: ಕುಸ್ತಿಪಟು ವಿನೇಶ್ ಫೋಗಟ್ ಅವರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಕ್ರೀಡಾ ನ್ಯಾಯಮಂಡಳಿಗೆ ಸಲ್ಲಿಸಿರುವ ಮೇಲ್ಮನವಿ ಅರ್ಜಿಯು ವಜಾಗೊಂಡಿದೆ. ಕ್ರೀಡಾ ನ್ಯಾಯಮಂಡಳಿಯ ಹಂಗಾಮಿ ಪೀಠವು ವಿನೇಶ್ ಫೋಗಟ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.
ವಿನೇಶ್ ಅವರು ಪ್ಯಾರಿಸ್ ಒಲಿಂಪಿಕ್ ಕೂಟದ
ಮಹಿಳೆಯರ 50 ಕೆ.ಜಿ. ಫ್ರೀಸ್ಟೈಲ್ ಕುಸ್ತಿ ಫೈನಲ್ ಪ್ರವೇಶಿಸಿದ್ದರು. ಫೈನಲ್ಗೆ ಮುನ್ನ ಅವರು ದೇಹತೂಕ ಪರೀಕ್ಷೆಯಲ್ಲಿ 100 ಗ್ರಾಂ ಹೆಚ್ಚು ತೂಗಿದ್ದರು. ಇದರಿಂದಾಗಿ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿ ಸಲಾಗಿತ್ತು. ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಲಭಿಸುವ ಅವಕಾಶ ಕೈಜಾರಿತ್ತು. ಇದರಿಂದಾಗಿ ವಿನೇಶ್ ಅವರು ತಾವು ಸೆಮಿಫೈನಲ್ ಮುಕ್ತಾಯದ ವರೆಗೂ ದೇಹತೂಕ ನಿರ್ವಹಣೆ
ಯನ್ನು ಮಾಡಿದ್ದ ಕಾರಣ ಬೆಳ್ಳಿಪದಕ ವನ್ನು ನೀಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರು. ಇದನ್ನು ಒಲಿಂಪಿಕ್ಸ್ನಲ್ಲಿರುವ ಕ್ರೀಡಾ ನ್ಯಾಯಮಂಡಳಿಯ ಹಂಗಾಮಿ ಪೀಠವು ವಿಚಾರಣೆ ನಡೆಸಿತ್ತು.