ಪ್ಯಾರಿಸ್: ಫ್ರಾನ್ಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ಭಾರತದ ಕುಸ್ತಿಪಟು ವಿನೇಶಾ ಫೋಗಾಟ್ ಸೆಮಿಫೈನಲ್ಗೆ ಪ್ರವೇಶಿಸಿದ್ದಾರೆ.
ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಿನೇಶಾ ಅವರು ಉಕ್ರೇನ್ನ ಒಸ್ಕಾನ ವಿವಚ್ ವಿರುದ್ಧ 7-5ರ ಅಂತರದ ಗೆಲುವು ಸಾಧಿಸಿದ್ದಾರೆ.ಕೊನೆಯವರೆಗೂ
ರೋಚಕವಾಗಿ ಸಾಗಿದ ಪಂದ್ಯದಲ್ಲಿ ವಿನೇಶಾ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು. ಆ ಮೂಲಕ ಭಾರತಕ್ಕೆ ಪದಕದ ನಿರೀಕ್ಷೆ ಮೂಡಿಸಿದ್ದಾರೆ.ಇದಕ್ಕೂ ಮೊದಲು ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಕಳೆದ ಬಾರಿಯ ಒಲಿಂಪಿಕ್ಸ್ ಚಾಂಪಿಯನ್ ಮತ್ತು ನಾಲ್ಕು ಬಾರಿಯ ವಿಶ್ವ ಚಾಂಪಿಯನ್, ಜಪಾನಿನ ಯುಇ ಸುಸಾಕಿ ಅವರನ್ನು ಫೋಗಾಟ್ ಮಣಿಸಿದರು.ಮೊದಲ ಸುತ್ತಿನಲ್ಲೇ ವಿನೇಶಾ ಅವರಿಗೆ ಅತ್ಯಂತ ಕಠಿಣ ಸವಾಲು ಎದುರಾಗಿತ್ತು. ಆದರೆ ರೋಚಕ ಹಣಾಹಣಿಯಲ್ಲಿ 3-2ರ ಅಂತರದಲ್ಲಿ ಗೆಲುವು ಸಾಧಿಸುವಲ್ಲಿ ವಿನೇಶಾ ಯಶಸ್ವಿಯಾದರು.ಕೊನೆಯ ಕ್ಷಣದಲ್ಲಿ ಅದ್ಭುತ ಪ್ರದರ್ಶನ ತೋರಿದ ವಿನೇಶಾ, ಎದುರಾಳಿ ವಿರುದ್ಧ ಮೇಲುಗೈ ಸಾಧಿಸಿದರು.