ವಿನೋಬನಗರ: ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ಸ್ಥಾಪಕರಾದ ಅಗಲಿದ ಕೆ. ಉಪೇಂದ್ರ ಕಾಮತ್ ಅವರಿಗೆ ವಿದ್ಯಾಸಂಸ್ಥೆಯ ವತಿಯಿಂದ ಶ್ರದ್ಧಾಂಜಲಿ ಸಭೆ ಹಾಗೂ ನುಡಿನಮನ ಸಲ್ಲಿಕೆ ಕಾರ್ಯಕ್ರಮವು ಮೇ.12ರಂದು ವಿದ್ಯಾಸಂಸ್ಥೆಯ
ವಠಾರದಲ್ಲಿ ಜರುಗಿತು.ಶಾಲಾ ಆಡಳಿತಾಧಿಕಾರಿ ಎನ್. ಗೋಪಾಲರಾವ್, ಪ್ರಾಥಮಿಕ ಶಾಲಾ ವಿಭಾಗದ ಎಸ್.ಡಿ.ಎಂ.ಸಿ. ಸದಸ್ಯ ಶಿವಪ್ರಸಾದ್ ಉಗ್ರಾಣಿಮನೆ, ರಾಷ್ಟ್ರೋತ್ಥಾನ ಶಿಶುಮಂದಿರದ ಪೋಷಕ ಸಮಿತಿಯ ಅಧ್ಯಕ್ಷ ಯಶ್ವಿತ್ ಕಾಳಂಮನೆ,ಪ್ರಾಥಮಿಕ ಶಾಲಾ ವಿಭಾಗದ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ರವಿರಾಜ್ ಗಬ್ಬಲಡ್ಕ,ವಿದ್ಯಾಸಂಸ್ಥೆಯ ಸಿಬ್ಬಂದಿ ಶಾಲಿನಿ,ಶಿಕ್ಷಕಿಯರಾದ ವಾಣಿ,ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್,
ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ,
ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಡಾ.ಗೋಪಾಲಕೃಷ್ಣ ಭಟ್ ,
ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಉಪೇಂದ್ರ ಕಾಮತ್ ಅವರ ಕುರಿತು ಮಾತನಾಡಿ, ನುಡಿನಮನ ಸಲ್ಲಿಸಿದರು.
ಶಾಲಾ ಸಂಚಾಲಕರಾದ ಸುಧಾಕರ ಕಾಮತ್ ಅವರು ಮಾತನಾಡಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ ನೂರು ಪ್ರತಿಶತ ಸಾಧನೆ ಮಾಡುವ ಮೂಲಕ ವಿವೇಕಾನಂದ ವಿದ್ಯಾಸಂಸ್ಥೆಯ ಹತ್ತನೇ ತರಗತಿ ವಿದ್ಯಾರ್ಥಿಗಳು ತಾಲೂಕಿನಲ್ಲಿ ವಿದ್ಯಾಸಂಸ್ಥೆಯ ಹೆಸರಿಗೆ ಕೀರ್ತಿ ತಂದಿದ್ದಾರೆ. ಇದುವೇ ಸ್ಥಾಪಕರಾದ ಉಪೇಂದ್ರ ಕಾಮತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು, ರಾಷ್ಟ್ರೋತ್ಥಾನ ಶಿಶುಮಂದಿರ, ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹಶಿಕ್ಷಕರು, ಶಾಲಾ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು, ಶಾಲಾ ವಾಹನ ಚಾಲಕರುಗಳು, ಅಡುಗೆ ಸಿಬ್ಬಂದಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ದಿ. ಕೆ. ಉಪೇಂದ್ರ ಸುಬ್ರಾಯ ಕಾಮತ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.