ಮಂಗಳೂರು: ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಲ್ಲೆಯ ಯುವಕ, ಯುವತಿಯರಿಗೆ 10 ದಿನಗಳ ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಆಸಕ್ತ ಯುವಕ, ಯುವತಿಯರಿಂದ ಫೆ.23ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ: ಶಿಬಿರದಲ್ಲಿ ಭಾಗವಹಿಸುವ ಯುವಕ, ಯುವತಿಯರು
ದಕ್ಷಿಣ ಕನ್ನಡ ಜಿಲ್ಲೆಯವರಾಗಿರಬೇಕು, ಕನಿಷ್ಟ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು, 18 ರಿಂದ 35 ವರ್ಷ ವಯೋಮಾನದವರಾಗಿರಬೇಕು. ಜೀವ ರಕ್ಷಕ ಕವಚವಿಲ್ಲದೆ ಕನಿಷ್ಟ 100 ಮೀಟರ್ ಈಜಬೇಕು. 10 ದಿನಗಳ ವಸತಿ ಸಹಿತ ತರಬೇತಿಗೆ ಸ್ವಯಂ ಇಚ್ಚೆ ಹೊಂದಿರಬೇಕು.ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ದಕ್ಷಿಣ ಕನ್ನಡ ಜಿಲ್ಲೆ (ದೂ.ಸಂಖ್ಯೆ:0824-2451264) ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.