ವಿರಾಜಪೇಟೆ: ಕೊಡಗು ಜಿಲ್ಲಡಯ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ಸಮಾವೇಶಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಗೃಹಸಚಿವರಾದ ಜಿ.ಪರಮೇಶ್ವರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ನಗರಾಭಿವೃದ್ಧಿ
ಸಚಿವ ಬೈರತಿ ಸುರೇಶ್, ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್, ಕೊಡಗು ಉಸ್ತುವಾರಿ ಸಚಿವ ಬೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ಸೇರಿದಂತೆ ಕಾಂಗ್ರೆಸ್ ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು , ಜಿಲ್ಲೆಯ ಹಲವೆಡೆಗಳಿಂದ ಆಗಮಿಸಿದ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಆಗಮಿಸಿದ್ದರು.










