ರಾಯಪುರ: ಛತ್ತೀಸಗಢದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಕೇಂದ್ರ ಸಚಿವ ವಿಷ್ಣು ದೇವ್ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ.ನಗರದಲ್ಲಿ ನಡೆದ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆದಿದೆ. ವಿಷ್ಣು ದೇವ್ ಸಾಯಿ ಅವರು 2020ರಿಂದ 2022ರ ವರೆಗೆ ಛತ್ತೀಸಗಢದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿಯೂ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿದ್ದರು. 90 ಸದಸ್ಯರ ಛತ್ತೀಸ್ಗಡ ವಿಧಾನಸಭೆಯಲ್ಲಿ ಬಿಜೆಪಿ 54 ಸ್ಥಾನ ಪಡೆದು ಬಿಜೆಪಿ ಅಧಿಕಾರ ಹಿಡಿದಿತ್ತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









