ಬೆಂಗಳೂರು:ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಕರ್ನಾಟಕದ ಹಾಸನ ಜಿಲ್ಲೆ ಬೇಲೂರು ಮತ್ತು ಹಳೆಬೀಡಿನಲ್ಲಿರುವ ಹಾಗೂ ಮೈಸೂರು ಜಿಲ್ಲೆ ಸೋಮನಾಥಪುರದಲ್ಲಿರುವ ಹೊಯ್ಸಳ ದೇವಾಲಯಗಳು ಸ್ಥಾನ ಪಡೆದಿವೆ. ಸೋಮನಾಥಪುರಲ್ಲಿರುವ ಕೇಶವ ದೇವಸ್ಥಾನ, ಬೇಲೂರಿನಲ್ಲಿರುವ ಚನ್ನಕೇಶವ ದೇವಸ್ಥಾನ ಹಾಗೂ ಹಳೆಬೀಡಿನಲ್ಲಿರುವ ಹೊಯ್ಸಳೇಶ್ವರ ದೇವಸ್ಥಾನಗಳು ಯುನೆಸ್ಕೋ
ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರಿವೆ.
ಈ ದೇವಾಲಯಗಳು ಕಲೆ, ವಾಸ್ತುಶಿಲ್ಪ, ಸಂಸ್ಕೃತಿಯ ಪ್ರತೀಕವಾಗಿದ್ದು, 12-15 ನೇ ಶತಮಾನದಲ್ಲಿ ನಿರ್ಮಿಸಲಾದ ಹೊಯ್ಸಳರ ಶೈಲಿಯ ಶಿಲ್ಪಕಲಾ ಶೈಲಿಯ ದೇಗುಲಗಳು, ರಾಜ್ಯದ ಐತಿಹ್ಯ ಮತ್ತು ಕಲೆ- ಸಂಸ್ಕೃತಿಗೆ ಪ್ರತೀಕವಾಗಿರುವ 12 ಮತ್ತು 15ನೇ ಶತಮಾನಗಳಲ್ಲಿ ನಿರ್ಮಾಣಗೊಂಡಿರುವ ಹಾಸನ ಜಿಲ್ಲೆಯ ಬೆಲೂರು, ಹಳೆಬೀಡು ಮತ್ತು ಮೈಸೂರು ಜಿಲ್ಲೆಯ ಸೋಮನಾಥಪುರ ದೇಗುಲಗಳಿಗೆ ಜಾಗತಿಕ ಮನ್ನಣೆ ದೊರೆತಿದ್ದು, ಯೂನೆಸ್ಕೋ ಈ ಮೂರು ದೇಗುಲಗಳನ್ನು ʼವಿಶ್ವ ಪಾರಂಪರಿಕ ತಾಣʼ ಎಂದು ಘೋಷಣೆ ಮಾಡಿರುವುದಾಗಿ ಪ್ರವಾಸೋದ್ಯಮ ಮತ್ತು ಕಾನೂನು ಸಚಿವ ಎಚ್.ಕೆ. ಪಾಟೀಲ ತಿಳಿಸಿದ್ದಾರೆ. ಬೇಲೂರು, ಹಳೆ ಬೀಡು, ಸೋಮನಾಥಪುರ ದೇಗುಲಗಳು ಯುನೆಸ್ಕೋ ಪಟ್ಟಿಗೆ ನಾಲ್ಕನೇ ತಾಣವಾಗಿ ಸೇರ್ಪಡೆಗೊಂಡಿವೆ ಎಂದು ತಿಳಿಸಿರುವ ಸಚಿವ ಎಚ್.ಕೆ. ಪಾಟೀಲ, ಈಗಾಗಲೇ ರಾಜ್ಯದ ಪಶ್ಚಿಮಘಟ್ಟ ಪ್ರದೇಶ, ಹಂಪೆ, ಪಟ್ಟದಕಲ್ಲು ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ ಎಂದಿದ್ದಾರೆ.