ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ವಿಶ್ವಕರ್ಮ ಜಯಂತಿ ಬುಧವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಆಚರಣೆ.ಕಾರ್ಯಕ್ರಮವನ್ನು
ಪಟ್ಟಣ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ ನೀರಬಿದಿರೆ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಸಭಾ ವೇದಿಕೆಯಲ್ಲಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಬುದ್ದ ನಾಯ್ಕ್ , ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ಅಧ್ಯಕ್ಷೆ ತಾಹಶೀಲ್ದಾರ್ ಮಂಜುಳ ಎಂ ಉಪಸ್ಥಿತರಿದ್ದರು. ಚಂದ್ರಕಾಂತ್ ಎಂ ಆರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.





