ಸುಳ್ಯ:ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾಚ ಸಮಿತಿಯ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕಿ ಭಾಗೀರಥಿ ಮುರುಳ್ಯ ಸಮಾರಂಭವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ
ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಅತಿಥಿಗಳಾಗಿದ್ದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷೆ ಹಾಗು ತಹಶೀಲ್ದಾರ್ ಮಂಜುಳ.ಎಂ, ತಾ.ಪಂ. ಕಾರ್ಯನೊರ್ವಹಣಾಧಿಕಾರಿ ರಾಜಣ್ಣ,, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕಾರ್ಯದರ್ಶಿ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ ಮತ್ತಿತರರು ಉಪಸ್ಥಿತರಿದ್ದರು.








