ಮಂಗಳೂರು: ವಿಜಯ ಕರ್ನಾಟಕ ದಿನಪತ್ರಿಕೆ ವತಿಯಿಂದ ನೀರುಮಾರ್ಗ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಮಂಗಳವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ವಿಕ ಸೂಪರ್ ಸ್ಟಾರ್ ರೈತ 2024-25ನೇ ಸಾಲಿನ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ದೇಲಂಪಾಡಿ ಗ್ರಾಮದ ಪರಪ್ಪ ಮೂಲದ ಕೃಷಿಕ ಹಾಗೂ ಸುಳ್ಯದ ಉದ್ಯಮಿ ಸಿ.ಎಚ್.ಅಶ್ರಫ್ ಹಾಗೂ ಉಬರಡ್ಕ ಕುತ್ತಮೊಟ್ಟೆಯ ಕೃಷಿಕ ಕೃಷ್ಣನ್ ನಾಯರ್ ಗೆ `ವಿಕ ಸೂಪರ್ ಸ್ಟಾರ್ ರೈತ’ ಪುರಸ್ಕಾರ ಪ್ರದಾನ ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಪುರಸ್ಕಾರ ಪ್ರದಾನ ಮಾಡಿದರು. ಮಂಗಳೂರು

ಉತ್ತರ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ, ಮಂಗಳೂರು ಮಾಜಿ ಮೇಯರ್ ಭಾಸ್ಕರ ಕೆ., ದಕ್ಷಿಣ ಕನ್ನಡ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ, ದಕ್ಷಿಣ ಕನ್ನಡ ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ನೀರುಮಾರ್ಗ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಧರ್, ನೀರುಮಾರ್ಗ ಸೇವಾ ಸಹಕಾರಿ ಸಂಘದ ಅಧ್ಯಕ್ಷೆ ಸೆಲಿನ್ ಡಿಮೆಲ್ಲೊ, ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕ ರವೀಂದ್ರ ಶೆಟ್ಟಿ, ವಿಜಯ ಕರ್ನಾಟಕ ರೆಸ್ಪಾನ್ಸ್ ವಿಭಾಗದ ಎಜಿಎಂ ರಾಮಕೃಷ್ಣ ಡಿ., ವಿಜಯ ಕರ್ನಾಟಕ ಆರ್ ಎಂಡಿ ವಿಭಾಗದ ಚೀಫ್ ಮ್ಯಾನೇಜರ್ ನಾರಾಯಣ ಉಪಸ್ಥಿತರಿದ್ದರು.ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಮುಖ್ಯ ಉಪ ಸಂಪಾದಕ ಆರ್.ಸಿ.ಭಟ್ ಸುಳ್ಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.