ಸುಳ್ಯ:ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಯುವಜನ ಸಂಯುಕ್ತ ಮಂಡಳಿ ಸಭಾ ಭವನದಲ್ಲಿ ಜರಗಿತು.ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಸಂಯೋಜಕ ಎನ್. ಜಯಪ್ರಕಾಶ್ ರೈ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.ಅಧ್ಯಕ್ಷತೆಯನ್ನು
ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಉಪಾಧ್ಯಕ್ಷ ಎಸ್. ಸಂಶುದ್ದೀನ್ ವಹಿಸಿದ್ದರು.ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ. ಮುಸ್ತಫ ಮುಖ್ಯ ಅತಿಥಿಯಾಗಿದ್ದರು. ನಿಕಟ ಪೂರ್ವ ಅಧ್ಯಕ್ಷ ದೊಡ್ಡಣ್ಣ ಬರಮೇಲು ನೂತನ ಪದಾಧಿಕಾರಿಗಳು ಮತ್ತು

ಕಾರ್ಯ ಕಾರಿ ಸಮಿತಿ ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿ, ಪದ ಗ್ರಹಣ ನಡೆಸಿಕೊಟ್ಟರು. ವೇದಿಕೆಯಲ್ಲಿ ವಾಲಿಬಾಲ್ ಅಸೋಸಿಯೇಷನ್ನ ನೂತನ ಪದಾಧಿಕಾರಿಗಳಾದ ಅಧ್ಯಕ್ಷ ಜಯಪ್ರಕಾಶ್ ಕುಡೆಕಲ್ಲು, ಕಾರ್ಯದರ್ಶಿ ಸುದರ್ಶನ್, ಖಜಾಂಚಿ ಅಬ್ದುಲ್ ರಜ್ಜಾಕ್ (ರಜ್ಜು ಬಯ್ಯ) ಉಪಸ್ಥಿತರಿದ್ದರು.ಶಶಿಧರ್ ಎಂ. ಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.










