ಮಂಗಳೂರು: ಭಾರತೀಯ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ವೇಳಾಪಟ್ಟಿ ಹೊರಡಿಸಲಾಗಿದ್ದು, ಆರೋಗ್ಯಕರ ಮತದಾರರ ಪಟ್ಟಿಯನ್ನು ತಯಾರಿಸಲು ಇದೇ ಆ.21ರವರೆಗೆ ಮನೆ ಮನೆ ಸಮೀಕ್ಷೆ
ಹಮ್ಮಿಕೊಳ್ಳಲಾಗಿದೆ. ಈ ಸಮೀಕ್ಷೆಯನ್ನು ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳಾದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಇನ್ನಿತರ ಅಧಿಕೃತವಾದ ನಿಗದಿಪಡಿಸಿದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಮೀಕ್ಷೆಯನ್ನು ನಡೆಸಿ ವರದಿ ಪಡೆಯಲಿದ್ದಾರೆ. ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಕುಟುಂಬಗಳ ಪೂರ್ಣ ವಿವರ ಮತ್ತು ಮಾಹಿತಿಯನ್ನು ಅವರಿಗೆ ನೀಡಿ ಸಮೀಕ್ಷೆಗೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.