ಸುಳ್ಯ:ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇವರ ಸಹಯೋಗದಲ್ಲಿ, ಎಒಎಲ್ಇ ಸುಳ್ಯ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಗುಡ್ಡಗಾಡು ಓಟ ಸೆ.19ರಂದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಪುರುಷ ಹಾಗು
ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಮೂಡಬಿದ್ರೆ ಚಾಂಪಿಯನ್ ಆಯಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಮೂಡಬಿದ್ರೆ ಪ್ರಥಮ ಸ್ಥಾನ, ಉಜಿರೆಯ ಎಸ್ಡಿಎಂ ಕಾಲೇಜು ದ್ವಿತೀಯ ಸ್ಥಾನ ಹಾಗೂ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ತೃತೀಯ ಸ್ಥಾನ ಪಡೆದುಕೊಂಡಿವೆ. ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಮೂಡಬಿದ್ರೆ ಪ್ರಥಮ, ಉಜಿರೆಯ ಎಸ್ಡಿಎಂ ಕಾಲೇಜು ದ್ವಿತೀಯ ಹಾಗೂ ಬೆಳ್ತಂಗಡಿಯ ಸರ್ಕಾರಿ ಪದವಿ ಕಾಲೇಜು ತೃತೀಯ ಸ್ಥಾನ ಗಳಿಸಿವೆ. ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ
ವಿವಿಧ ಕಾಲೇಜುಗಳ 260 ಕ್ರೀಡಾಪಟುಗಳು ಈ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿದ್ದರು.ಎಒಎಲ್ಇಯ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಗುಡ್ಡಗಾಡು ಓಟಕ್ಕೆ ಚಾಲನೆ ನೀಡಿದರು.ಸಮಾರೋಪ ಸಮಾರಂಭದಲ್ಲಿ
ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ, ಎಒಎಲ್ಇ ಸುಳ್ಯದ ಕಾರ್ಯದರ್ಶಿ ಹೇಮನಾಥ ಕುರುಂಜಿ, ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್.ಎಂ.ಎಂ, ಪ್ರೊ. ದಾಮೋದರ ಕೆ, ಚಂದ್ರಶೇಖರ ಪೇರಾಲು,ಕೆ.ಟಿ. ವಿಶ್ವನಾಥ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.








