ಪೆರುವಾಜೆ: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷ ಹಾಗೂ ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆ ಡಾ.ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಸಂಘಟಿಸಲಾಯಿತು. ಉದ್ಘಾಟನಾ ಸಮಾರಂಭದ ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ದಾಮೋದರ ಕಣಜಾಲು ವಹಿಸಿದ್ದರು.ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ
ಅಧ್ಯಕ್ಷರಾದ ಶ್ರೀರಾಮ ಪಾಟಾಜೆ ಹಗ್ಗ ಜಗ್ಗಾಟ ಸ್ಪರ್ಧೆಯ ಉದ್ಘಾಟನೆ
ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಮಾಧವ ಗೌಡ, ಮಿಥುನ್ ಶೈಣೈ ಬೆಳ್ಳಾರೆ ಭಾಗವಹಿಸಿ ಮಾತನಾಡಿದರು.
ಮಂಗಳೂರು ವಿಶ್ವ ವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿ ಸೋಜ ಹಾಗೂ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ರವಿಕುಮಾರ್ ಕಿರಿಭಾಗ ಇವರುಗಳು ಅತಿಥಿಗಳಾಗಿ ಭಾಗವಹಿಸಿದ್ದರು.
ಕಾಲೇಜಿನ ಕ್ರೀಡಾ ಕಾರ್ಯದರ್ಶಿ ಅಂತಿಮ ಬಿಎಸ್ ಡಬ್ಲ್ಯೂ ವಿದ್ಯಾರ್ಥಿನಿ ನೀಶ್ಮಾ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ರಾಮಚಂದ್ರ ಕೆ ಸ್ವಾಗತಿಸಿದರು. ಪ್ರಥಮ ಬಿಕಾಂ ವಿದ್ಯಾರ್ಥಿನಿ ಶ್ರಾವ್ಯ ವಂದಿಸಿದರು.
ಸಮಾರೋಪ ಸಮಾರಂಭದ ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ದಾಮೋದರ ಕಣಜಾಲು ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಕ್ಕೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ದಯಾಕರ ಆಳ್ವ, ಬೆಳ್ಳಾರೆ ಜೆಸಿಐ ಅಧ್ಯಕ್ಷ ಜೆಸಿ ಜಗದೀಶ ರೈ ಪೆರುವಾಜೆ ಮತ್ತು ಉದ್ಯಮಿಗಳು ಹಾಗೂ ಝಕಾರಿಯಾ ಜುಮ್ಮಾ ಮಸೀದಿ ಬೆಳ್ಳಾರೆ ಇದರ ಅಧ್ಯಕ್ಷರಾದ ಯು.ಎಚ್ ಅಬೂಬಕ್ಕರ್, ಅವರುಗಳು ಭಾಗವಹಿಸಿದ್ದರು. ದ್ವಿತೀಯ ಎಂಕಾಂ ಪದವಿ ವಿದ್ಯಾರ್ಥಿನಿಸೃಷ್ಟಿಕಾ ಕಾರ್ಯಕ್ರಮ ನಿರ್ವಹಿಸಿದರು, ದ್ವಿತೀಯ ಎಂಕಾಂ ವಿದ್ಯಾರ್ಥಿನಿ ಪವಿತ್ರ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ರಾಮಚಂದ್ರ ಕೆ ವಂದಿಸಿದರು.
ಹಗ್ಗ ಜಗ್ಗಾಟ ವಿಜೇತರು:
ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಒಟ್ಟು 30 ತಂಡಗಳು ಭಾಗವಹಿಸಿದ್ದರು. ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಆಳ್ವಾಸ್ ಕಾಲೇಜು ಮೂಡಬಿದಿರೆ, ದ್ವಿತೀಯ ಸ್ಥಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನೆಡಿಯೂರು ಉಡುಪಿ ಜಿಲ್ಲೆ, ತೃತೀಯ ಸ್ಥಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಹಾಗೂ ಚತುರ್ಥ ಸ್ಥಾನವನ್ನು ಕೆ.ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ ತಂಡಗಳು ಪಡೆದುಕೊಂಡವು. ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಡಾ.ಜಿ ಶಂಕರ್ ಸರಕಾರಿ ಮಹಿಳಾ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ, ದ್ವಿತೀಯ ಸ್ಥಾನವನ್ನು ಸರಕಾರಿ ಪಥಮ ದರ್ಜೆ ಕಾಲೇಜು ಸುಳ್ಯ, ತೃತೀಯ ಸ್ಥಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಹಾಗೂ ಚತುರ್ಥ ಸ್ಥಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ತಂಡಗಳು ಪಡೆದುಕೊಂಡವು.