ಧರ್ಮಸ್ಥಳ: ಮನುಷ್ಯರು ವ್ಯಸನಗಳ ದಾಸರಾಗಬಾರದು. ಚಟಗಳಿಂದಾಗಿ ಹಣ, ಆರೋಗ್ಯ, ಮರ್ಯಾದೆ, ಪ್ರೀತಿ-ವಿಶ್ವಾಸ ಎಲ್ಲವನ್ನೂ ಮದ್ಯವ್ಯಸನಿಗಳು ಕಳೆದುಕೊಳ್ಳುತ್ತಾರೆ ಎಂದು ಶಿರಹಟ್ಟಿ ಭಾವೈಕ್ಯತಾ ಪೀಠದ ಪೂಜ್ಯ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.ಅವರು ಧರ್ಮಸ್ಥಳದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ
ಆಯೋಜಿಸಿದ ೨೯೦೦ ಮಂದಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.
ಮದ್ಯಪಾನ ಸಂಪೂರ್ಣ ನಿಷೇಧ ಮಾಡುವ ಸರ್ಕಾರ ಬಂದರೆ ಮಾತ್ರ ರಾಜ್ಯದ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ.
ವ್ಯಸನಮುಕ್ತರು ಮುಂದೆ ದೃಢಸಂಕಲ್ಪದೊಂದಿಗೆ ಸಾರ್ಥಕ ಜೀವನ ನಡೆಸಿ ಪರಿಸರದವರಿಗೂ ವ್ಯಸನಮುಕ್ತರಾಗುವ ಪ್ರೇರಣೆ ನೀಡಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ವ್ಯಸನಮುಕ್ತರು ಕುಟುಂಬದ ಸದಸ್ಯರೊಂದಿಗೆ ಪ್ರೀತಿ-ವಿಶ್ವಾಸದಿಂದ ಮುಕ್ತವಾಗಿ ಬೆರೆಯಬೇಕು. ಮತ್ತೆ ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಹೇಳಿ ಶುಭ ಹಾರೈಸಿದರು.
ಬೆಂಗಳೂರಿನ ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾಅಮಿತ್ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಶುಭ ಹಾರೈಸಿದರು. ಹೇಮಾವತಿ ವಿ. ಹೆಗ್ಗಡೆಯವರು ಶುಭ ಹಾರೈಸಿದರು.
ಮೂಡಬಿದಿರೆ ಡಾ. ವಿನಯ್ ಆಳ್ವ ಜಾಗೃತಿಅಣ್ಣ ಮತ್ತು ಜಾಗೃತಿಮಿತ್ರ ಪ್ರಶಸ್ತಿ ಪ್ರದಾನ ಮಾಡಿದರು.
ಡಾ. ಪಿ. ವಿ. ಭಂಡಾರಿ, ಡಾ. ಶ್ರೀನಿವಾಸ ಭಟ್, ವಿ.ರಾಮಸ್ವಾಮಿ, ಪದ್ಮನಾಭ ಶೆಟ್ಟಿ ಮತ್ತು ಕಾಸಿಂ ಉಪಸ್ಥಿತರಿದ್ದರು.
ಅನಿಲ್ ಕುಮಾರ್ ಆಶಯ ನುಡಿಗಳನ್ನು ಆಡಿ ಶುಭ ಹಾರೈಸಿದರು.
ವಿವೇಕ್ ವಿ. ಪಾಯಸ್ ಸ್ವಾಗತಿಸಿದರು. ನಟರಾಜ್ ಬಾದಾಮಿ ಧನ್ಯವಾದವಿತ್ತರು.ಯೋಜನಾಧಿಕಾರಿಗಳಾದ ನಾಗರಾಜ್ ಮತ್ತು ರಾಜೇಶ್ ಕಾರ್ಯಕ್ರಮ ನಿರ್ವಹಿಸಿದರು.