ಸುಳ್ಯ:ಜ.15 ಮತ್ತು 16 ರಂದು ಸುಳ್ಯ ನಗರದಲ್ಲಿ ಕುಡಿಯುವ ನೀರು ಸರಬರಾಜು ಇರುವುದಿಲ್ಲ.ಸುಳ್ಯ ನಗರ ಪಂಚಾಯತ್ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಲ್ಲುಮುಟ್ಲು ರೇಚಕ ಸ್ಥಾವರದಲ್ಲಿ ಹೂಳೆತ್ತುವ ಕಾರ್ಯ ನಡೆಯಲಿರುವುದರಿಂದ ಈ ಎರಡು
ದಿನ ಕುಡಿಯುವ ನೀರು ಸರಬರಾಜು ಇರುವುದಿಲ್ಲ ಎಂದು ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯವರು ತಿಳಿಸಿದ್ದಾರೆ. ಬೋರ್ ವೆಲ್ ಗಳಿಂದ ನೀರು ಸರಬರಾಜಾಗುವ ಕಡೆಗಳಲ್ಲಿ ಕೂಡ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.