ಸುಳ್ಯ: ಸುಳ್ಯ ನಗರದಲ್ಲಿ ಅನುಷ್ಠಾನವಾಗುತ್ತಿರುವ ಅಮೃತ್ ಕುಡಿಯುವ ನೀರಿನ ಯೋಜನೆಯ ಟ್ಯಾಂಕ್ ನಿರ್ಮಾಣಕ್ಕೆ ಬೋರುಗುಡ್ಡೆಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು. ಬೋರುಗುಡ್ಡೆ, ನಾವೂರು, ಜಟ್ಟಿಪಳ್ಳ ಪ್ರದೇಶಕ್ಕೆ
ನೀರು ಸರಬರಾಜು ಮಾಡಲು ಇಲ್ಲಿ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತದೆ. ನಗರ ಪಂಚಾಯತ್ ವಿಪಕ್ಷ ನಾಯಕ ಬಾಲಕೃಷ್ಣ ಭಟ್ ಗುದ್ದಲಿ ಪೂಜೆ ನೆರವೇರಿಸಿದರು. ನಗರ ಪಂಚಾಯತ್ ಸದಸ್ಯರಾದ ಕೆ.ಎಸ್.ಉಮ್ಮರ್, ಶರೀಫ್ ಕಂಠಿ, ಡೇವಿಡ್ ಧೀರಾ ಕ್ರಾಸ್ತಾ, ರಾಜು ಪಂಡಿತ್, ಸಿದ್ದಿಕ್ ಕೊಕ್ಕೋ ಪ್ರಮುಖರಾದ ಹಮೀದ್, ಇಕ್ಬಾಲ್ ಸುಣ್ಣಮೂಲೆ ಮತ್ತಿತರರು ಉಪಸ್ಥಿತರಿದ್ದರು.