ನವದೆಹಲಿ:ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ನ.13ರಂದು ನಡೆಯಲಿದೆ. ಕೇರಳದ ಪಾಲಕ್ಕಾಡ್, ಚೇಲಕ್ಕರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯೂ ಅಂದು ನಡೆಯಲಿದೆ. ನ.23ರಂದು ಮತ ಎಣಿಕೆ ನಡೆಯಲಿದೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಕಾರಣ
ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಘೋಷಿಸಲಾಗಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡುವ ಸಾಧ್ಯತೆ ಇರುವ ಕಾರಣ ಇಲ್ಲಿನ ಚುನಾವಣೆ ಕುತೂಹಲ ಕೆರಳಿಸಿದೆ. ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ರಾಯ್ ಬರೇಲಿ ಹಾಗೂ ವಯನಾಡ್ ಕ್ಷೇತ್ರಗಳಿಂದ ಗೆಲುವು ಸಾಧಿಸಿದ್ದ ಕಾರಣ ರಾಯ್ ಬರೇಲಿ ಕ್ಷೇತ್ರ ಉಳಿಸಿ ವಯನಾಡ್ ಕ್ಷೇತ್ರದ ಲೋಕಸಭಾ ಕ್ಷೇತ್ರಕ್ಕೆ ರಾಜಿನಾಮೆ ಸಲ್ಲಿಸಿದ್ದರು.