ವಯನಾಡು:ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮರಣ ಸಂಖ್ಯೆ ಏರುತ್ತಲೇ ಇದೆ. ಈವರೆಗೆ 49 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ವಿವಿಧ ಆಸ್ಪತ್ರೆಗಳ ಶವಾಗಾರಗಳಲ್ಲಿ ಇಡಲಾಗಿದೆ ಎಂದು ವರದಿಯಾಗಿದೆ.ಇನ್ನೂ ಹಲವು
ಮಂದಿ ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ.
ನೂರಾರು ಮಂದಿ ಸಿಲುಕಿರುವ ಶಂಕೆಇದೆ. ಗಾಯಗೊಂಡ 70 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೆ. ರಾಜನ್ ಹೇಳಿದ್ದಾರೆ.
ವಿವಿಧ ಕಡೆಗಳಿಂದ ಎನ್ಡಿಆರ್ಎಫ್ ತಂಡ ಆಗಮಿಸಿದೆ.